tamanvi
ರಾಜ್ಯ ವಾರ್ತೆ

ಇಸ್ರೇಲ್‌ನಲ್ಲಿ ಸಿಲುಕಿದ 18 ಮಂದಿ ಕನ್ನಡಿಗರು

D_shiva_bhat
ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ತೀವ್ರಗೊಂಡಿದ್ದು, ಅಧ್ಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು ಇಸ್ರೇಲ್‌ನಲ್ಲಿ ಸಿಲುಕಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ತೀವ್ರಗೊಂಡಿದ್ದು, ಅಧ್ಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು ಇಸ್ರೇಲ್‌ನಲ್ಲಿ ಸಿಲುಕಿದ್ದಾರೆ.

maithri

ಒಂದು ವಾರದಿಂದ ಇಸ್ರೇಲ್‌ನಲ್ಲಿದ್ದ ಕನ್ನಡಿಗರ ತಂಡ, ಶುಕ್ರವಾರ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಇಸ್ರೇಲ್ -ಇರಾನ್ ಸಂಘರ್ಷದ ಪರಿಣಾಮ ದಿಢೀರ್ ವಿಮಾನ ಹಾರಾಟ ಸ್ಥಗಿತಗೊಳಿಸಿದ ಹಿನ್ನೆಲೆ ಬಿ ಪ್ಯಾಕ್ ಎನ್‌ಜಿಒ ತಂಡ ಇಸ್ರೇಲ್ ರಾಜಧಾನಿ ಟೆಲ್ ಅವೀವ್‌ನಲ್ಲಿ ಉಳಿದುಕೊಂಡಿದೆ.

ಇಸ್ರೇಲ್ ಹಾಗೂ ಇರಾನ್ ನಡುವೆ ದಾಳಿ- ಪ್ರತಿದಾಳಿ ತೀವ್ರಗೊಂಡ ಬೆನ್ನಲ್ಲೇ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆ 61 ಮಂದಿ ಭಾರತೀಯರು ಜಾರ್ಜಿಯಾದಲ್ಲಿ ಸಿಲುಕಿದ್ದಾರೆ. ರಾಜಸ್ಥಾನದ 61 ಮಂದಿಯ ತಂಡ ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳುವ ಕಾರ್ಯಕ್ರಮಕ್ಕೆ ಜೂನ್ 8ರಂದು ತೆರಳಿದ್ದರು. ಜೂನ್ 13ರಂದು ಶಾರ್ಜಾ ಮೂಲಕ ಭಾರತಕ್ಕೆ ವಾಪಸ್ ಆಗಬೇಕಿತ್ತು. ವಿಮಾನ ಸ್ಥಗಿತಗೊಂಡ ಹಿನ್ನೆಲೆ ಅಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ತುರ್ತಾಗಿ ತಮಗೆ ಸಹಾಯ ಮಾಡುವಂತೆ ಕೋರಿ ಭಾರತ ಸರ್ಕಾರಕ್ಕೆ ಭಾರತೀಯ ತಂಡ ಮನವಿ ಮಾಡಿದೆ. ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುವಂತೆ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪ್ರವೇಶ ಶುಲ್ಕ ಏರಿಸಿದ ಮಂಗಳೂರು ವಿವಿ: ಭಾರೀ ಪ್ರತಿಭಟನೆ:  ವಿದ್ಯಾರ್ಥಿಗಳ ಆಕ್ರೋಶಕ್ಕೆ ಆಡಳಿತ ಸೌಧದ ಗಾಜು ಪುಡಿ!

ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.…