ರಾಜ್ಯ ವಾರ್ತೆ

ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ: ಕಾಯ್ದೆಗೆ ತಿದ್ದುಪಡಿ! ಹಾಗಾದರೆ ಶನಿವಾರ, ಭಾನುವಾರವೂ ರಜೆಯೇ?

ಕಾರ್ಮಿಕರ ಕೆಲಸದ ಅವಧಿಯ ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಮಿಕರ ಕೆಲಸದ ಅವಧಿಯ ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ.

akshaya college

ಸದ್ಯ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಸೆಕ್ಷನ್ 7ರ ಪ್ರಕಾರ ಕೆಲಸದ ಅವಧಿ ದಿನಕ್ಕೆ ಒಂಬತ್ತು ಗಂಟೆ ಮೀರಬಾರದು ಮತ್ತು ಗರಿಷ್ಠ ಒಟಿ 10 ಗಂಟೆಗಳನ್ನು ಮೀರಬಾರದು ಎಂಬ ನಿಯಮವಿದೆ.

ಈಗ ಈ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು ದಿನಕ್ಕೆ ಗರಿಷ್ಠ 10 ಗಂಟೆ ಮತ್ತು ಹೆಚ್ಚುವರಿ ಕೆಲಸದ ಅವಧಿಯನ್ನು ದಿನಕ್ಕೆ ಗರಿಷ್ಠ 12 ಗಂಟೆಗಳಿಗೆ ವಿಸ್ತರಿಸಲು ಚಿಂತನೆ ನಡೆಸಿದೆ.

ಕಾನೂನು ತಿದ್ದುಪಡಿ ವಿಚಾರ ಈಗ ಚರ್ಚಾ ಹಂತದಲ್ಲಿದ್ದು ಈ ಸಂಬಂಧ ರಾಜ್ಯ ಸರ್ಕಾರ ವಿಕಾಸ ಸೌಧದಲ್ಲಿ ಕೈಗಾರಿಕಾ ಮತ್ತು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸುತ್ತಿದೆ. ಈ ಸಭೆಯಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು, ಕಾರ್ಖಾನೆಗಳ ಮಾಲೀಕರು, ಕಾರ್ಮಿಕ ಸಂಘಟನೆಗಳು ಸದಸ್ಯರು ಭಾಗಿಯಾಗಿದ್ದಾರೆ.

ಈಗಾಗಲೇ ಕೇಂದ್ರ ಹಾಗೂ ಖಾಸಗಿ ಉದ್ಯೋಗಿಗಳ ಸಂಘದಿಂದಲೂ ಪ್ರಸ್ತಾವನೆ ಬಂದಿದೆ. ನಿತ್ಯ 10 ಗಂಟೆ ಕೆಲಸ ಮಾಡಿದರೆ ಶನಿವಾರ ಭಾನುವಾರ ಎರಡು ದಿನದ ರಜೆ ನೀಡಲಾಗುತ್ತದೆ.

ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರ ಸರ್ಕಾರ ಕೆಲ ದಿನಗಳ ಹಿಂದೆ ನಡೆಸಿದ ಸಂಪುಟ ಸಭೆಯಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸುವ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತ್ತು.

ಕಾನೂನು ತಿದ್ದುಪಡಿ ವಿಚಾರ ಈಗ ಚರ್ಚಾ ಹಂತದಲ್ಲಿದ್ದು ಈ ಸಂಬಂಧ ರಾಜ್ಯ ಸರ್ಕಾರ ವಿಕಾಸ ಸೌಧದಲ್ಲಿ ಕೈಗಾರಿಕಾ ಮತ್ತು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸುತ್ತಿದೆ. ಈ ಸಭೆಯಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು, ಕಾರ್ಖಾನೆಗಳ ಮಾಲೀಕರು, ಕಾರ್ಮಿಕ ಸಂಘಟನೆಗಳು ಸದಸ್ಯರು ಭಾಗಿಯಾಗಿದ್ದಾರೆ.

ಈಗಾಗಲೇ ಕೇಂದ್ರ ಹಾಗೂ ಖಾಸಗಿ ಉದ್ಯೋಗಿಗಳ ಸಂಘದಿಂದಲೂ ಪ್ರಸ್ತಾವನೆ ಬಂದಿದೆ. ನಿತ್ಯ 10 ಗಂಟೆ ಕೆಲಸ ಮಾಡಿದರೆ ಶನಿವಾರ ಭಾನುವಾರ ಎರಡು ದಿನದ ರಜೆ ನೀಡಲಾಗುತ್ತದೆ.

ಕಾರ್ಮಿಕ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಇದರಲ್ಲಿ ಕಾರ್ಮಿಕ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

1961 ರ ಆ ಕಾಯ್ದೆಯ ಸೆಕ್ಷನ್ 7 ರ ಪ್ರಕಾರ ಕೆಲಸದ ಅವಧಿ ದಿನಕ್ಕೆ 9 ಗಂಟೆ ಮೀರಬಾರದು ಎನ್ನುವ ನಿಯಮ ಇದೆ. ಓವರ್ ಟೈಮ್ ಕೂಡ ಸೇರಿ ಇದನ್ನು 12 ಗಂಟೆಗೆ ವಿಸ್ತರಿಸುವ ಪ್ರಸ್ತಾಪ ಇದೆ. ಓವರ್ ಟೈಮ್ ಅವಧಿ ಮೂರು ತಿಂಗಳಲ್ಲಿ 50 ಗಂಟೆಗೆ ಮಿತಿಗೊಳಿಸಲಾಗಿತ್ತು. ಅದನ್ನು 144 ಗಂಟೆಗೆ ಏರಿಸಲು ಸರ್ಕಾರ ಯೋಜಿಸಿದೆ.

ಕರ್ನಾಟಕ ಸರ್ಕಾರದ ಈ ಕಾರ್ಮಿಕ ಕಾನೂನು ತಿದ್ದುಪಡಿ ಪ್ರಸ್ತಾಪವನ್ನು ಐಟಿ ಉದ್ಯೋಗಿಗಳ ಒಕ್ಕೂಟವಾದ ಕೆಐಟಿಯು ಬಲವಾಗಿ ವಿರೋಧಿಸಿದೆ. ಕೆಲಸದ ಅವಧಿ 12 ಗಂಟೆಗೆ ವಿಸ್ತರಣೆಗೊಂಡರೆ ದಿನದಲ್ಲಿ ಇರುವ ಮೂರು ಶಿಫ್ಟ್ ಗಳ ಸಂಖ್ಯೆ ಎರಡಕ್ಕೆ ಇಳಿಯಬಹುದು. ಇದರಿಂದ ಉದ್ಯೋಗಗಳಿಗೆ ಕತ್ತರಿ ಬೀಳಬಹುದು ಎಂದು ಕೆಐಟಿಯು ಆತಂಕ ವ್ಯಕ್ತಪಡಿಸಿದೆ.

ಕಾರ್ಪೊರೇಟ್ ಸೆಕ್ಟರ್‌ನಲ್ಲಿರುವ 25 ವರ್ಷದೊಳಗಿನ ವಯಸ್ಸಿನ ಶೇ. 90ರಷ್ಟು ಉದ್ಯೋಗಿಗಳು ದೀರ್ಘ ಕೆಲಸದ ಅವಧಿಯಿಂದಾಗಿ ಆತಂಕದ ಮನಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಕಾರ್ಮಿಕ ಇಲಾಖೆ ನಡೆಸಿದ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸಿಐಟಿಯು ಅಧ್ಯಕ್ಷೆ ವರಲಕ್ಷ್ಮೀ ಕೂಡ ಈ ಪ್ರಸ್ತಾಪವನ್ನು ವಿರೋಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts