ರಾಜ್ಯ ವಾರ್ತೆ

ಬೆಂಗಳೂರು: ಡ್ಯಾನ್ಸ್ ಬಾರ್‌ಗಳ ಮೇಲೆ ಪೊಲೀಸರ ದಿಢೀರ್ ದಾಳಿ!!

ಡ್ಯಾನ್ಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ದಿಢೀ‌ರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ನಗರದ ಹಲವು ಡ್ಯಾನ್ಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ದಿಢೀ‌ರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

akshaya college

ನಗರದ್ಯಾಂತ ಸುಮಾರು 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಉಪ್ಪಾರಪೇಟೆ, ಕಬ್ಬನ್ ಪಾರ್ಕ್, ಅಶೋಕ ನಗರ, ಎಸ್.ಜೆ.ಪಾರ್ಕ್‌ ಸೇರಿ ಅನೇಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ. ಯುವತಿಯರು ಅರೆಬರೆ ಬಟ್ಟೆ ತೊಟ್ಟು ಡ್ಯಾನ್ಸ್‌, ಸಮಯ ಮೀರಿ ಓಪನ್, ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆರೋಪ ಕೇಳಿ ಬಂದ ಹಿನ್ನೆಲೆ ಈ ದಾಳಿ ನಡೆದಿದೆ.

ದಾಳಿ ನಡೆದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts