pashupathi
ರಾಜ್ಯ ವಾರ್ತೆ

ಇನ್ಮುಂದೆ ಪಂಚಾಯತ್ ಗಳಿಗೆ ಪ್ರತ್ಯೇಕ ಲಾಂಛನ, ಮೊಹರು!!| ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರಕಾರ!

tv clinic
ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನ, ಮೊಹರು ಹೊಂದಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನ, ಮೊಹರು ಹೊಂದಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

akshaya college

ಹೌದು, ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ಇರುವಂತೆ ಸ್ವತಂತ್ರ ಸ್ಥಳೀಯ ಸರಕಾರಗಳು ಎಂಬ ನೆಲೆಯಲ್ಲಿ ಪಂಚಾಯತ್‌ಗಳಿಗೂ ಪ್ರತ್ಯೇಕ ಲಾಂಛನ ಬೇಕು ಎಂಬ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದ್ದು, ಗ್ರಾಮೀಣ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ಗಳಿಗೆ ಇನ್ನು ಮುಂದೆ ಪ್ರತ್ಯೇಕ ಲಾಂಛನ ಇರಲಿದೆ.

ಅಂದಹಾಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 6ರಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಸ್ವಾಯತ್ತ ಅಧಿಕಾರ ಹೊಂದಿದೆ. ಪಂಚಾಯಿತಿ ಶಾಶ್ವತ ಉತ್ತರಾಧಿಕಾರ ಹೊಂದಿರುವುದರಿಂದ ಪ್ರತ್ಯೇಕ ಲಾಂಛನ, ಮೊಹರು ಹೊಂದಲು ಅವಕಾಶ ನೀಡಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಳಕೆಗೆ ಮಾರ್ಗಸೂಚಿಗಳು

ಸಂವಿಧಾನದ 73ನೇ ತಿದ್ದುಪಡಿ ಉದ್ದೇಶವನ್ನು ಈಡೇರಿಸಲು ಮತ್ತು ಜನರು ಗ್ರಾಮ ಸ್ವರಾಜ್ ಸ್ಥಳೀಯ ಸ್ವಯಂ ಆಡಳಿತದ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಗ್ರಾ.ಪಂ., ತಾ.ಪಂ. ಮತ್ತು ಜಿ.ಪಂ. ಹಂತದಲ್ಲಿ ಪಂಚಾಯತ್‌ರಾಜ್‌ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಈ 3 ಹಂತದ ಸಂಸ್ಥೆಗಳು ಅಧಿಕೃತ ಮುದ್ರೆ, ವಿನ್ಯಾಸದಲ್ಲಿ ಅರ್ಥಪೂರ್ಣವಾದ ಪ್ರತ್ಯೇಕ ಲಾಂಛನವನ್ನು ಸೃಜಿಸಲಾಗಿದೆ. ಇದರ ಬಳಕೆಗೆ ಕೆಲವು ಮಾರ್ಗಸೂಚಿಗಳನ್ನು ನೀಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…