tamanvi
ರಾಜ್ಯ ವಾರ್ತೆ

ಹೆಣ್ಣು ಮಗುವಿನ ಮೇಲೆ ಬಿಸಿ ನೀರು ಸುರಿದ ಸಿಬ್ಬಂದಿ! | ಕಾಫಿನಾಡಿನಲ್ಲೊಂದು ಅಮಾನವೀಯ ಘಟನೆ!

ಈ ಸುದ್ದಿಯನ್ನು ಶೇರ್ ಮಾಡಿ

ಒಂದು ವರ್ಷ ಮೂರು ತಿಂಗಳ ಹೆಣ್ಣು ಮಗುವಿನ ಮೇಲೆ ಸಿಬ್ಬಂದಿಯೋರ್ವರು ಬಿಸಿ ನೀರು ಸುರಿದ ಅಮಾನವೀಯ ಘಟನೆ ವರದಿಯಾಗಿದೆ.

ಕಾಫಿನಾಡು ಎಂದೇ ಖ್ಯಾತವಾದ ಚಿಕ್ಕಮಗಳೂರು ನಗರದ ಗಾಂಧಿನಗರದ ಸರ್ಕಾರಿ ವಿಶೇಷ ದತ್ತು ಸಂಸ್ಥೆ ಮಕ್ಕಳ ರಕ್ಷಣಾ ನಿರ್ದೇಶನಾಲಯದಲ್ಲಿ ಈ ಘಟನೆ ನಡೆದಿದೆ.

ಶಿಶು ಆರೈಕಾ ಸಿಬ್ಬಂದಿ ಎಡವಟ್ಟಿನಿಂದಾಗಿ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂಸ್ಥೆಯಲ್ಲಿ ಅನಾಥ ಮಕ್ಕಳನ್ನು ರಕ್ಷಣೆ ಮಾಡಿ ಆರೈಕೆ ಮಾಡಲಾಗುತ್ತದೆ. ಇಲ್ಲಿ ಸಿಬ್ಬಂದಿಗಳ ಬೇಜವಾಬ್ದಾರಿಯಿಂದ ಹೆಣ್ಣು ಮಗುವಿನ ಸೊಂಟದ ಕೆಳ ಭಾಗ ಸಂಪೂರ್ಣ ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.

ಈ ಹೆಣ್ಣು ಮಗುವನ್ನು ದತ್ತು ನೀಡಲು ಸಿದ್ಧತೆ ನಡೆದಿತ್ತು. ಅಷ್ಟರಲ್ಲಿ ಘಟನೆ ನಡೆದಿದೆ.

ಘಟನೆಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವುದು ಇರಲಿ, ಅವರ ಗಮನಕ್ಕೆ ಬಾರದಂತೆ ಮುಚ್ಚಿಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಸದ್ಯ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…