ರಾಜ್ಯ ವಾರ್ತೆ

ಕೆಂಪು ಕಲ್ಲು ಖರೀದಿಗೂ ಪ್ರತ್ಯೇಕ ಆ್ಯಪ್ ಜಾರಿ -ಸ್ಪೀಕರ್ ಯು ಟಿ ಖಾದರ್..!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್‌ ಬಜಾ‌ರ್ ಆ್ಯಪ್‌ನಂತೆ ಕೆಂಪು ಕಲ್ಲು ಖರೀದಿಗೂ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.

core technologies

ಈ ಹಿಂದೆ ಜಾರಿಗೆ ತರಲಾಗಿದ್ದ ‘ಸ್ಯಾಂಡ್ ಬಜಾ‌ರ್’ ಆ್ಯಪ್ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಸಿಗುತ್ತಿತ್ತು.ಅದೇ ಮಾದರಿಯಲ್ಲಿ ಕೆಂಪು ಕಲ್ಲು ಕೂಡ ಜನಸಾಮಾನ್ಯರಿಗೆ ಸಿಗಬೇಕು. ಈ ನಿಟ್ಟಿನಲ್ಲಿ ಕೆಂಪುಕಲ್ಲು ಖರೀದಿಗೂ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೊಳಿಸಲಾಗುವುದು.ಸರಕಾರಿ ದರದಲ್ಲಿ ಕೆಂಪು ಕಲ್ಲನ್ನು ಅಗತ್ಯ ಇರುವವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯು ನೂತನ ಆ್ಯಪ್ ಮೂಲಕ ಆಗಲಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರೊಂದಿಗೆ ಬೆಂಗಳೂರಿನಲ್ಲಿ 2ನೇ ಹಂತದ ಸಭೆ ನಡೆಸಲಾಗಿದೆ.

akshaya college

ಈ ಸಭೆಯಲ್ಲಿ ಅಧಿಕಾರಿಗಳು ವಹಿಸಬೇಕಾದ ಕ್ರಮಗಳ ಕುರಿತು ಸೂಚಿಸಲಾಗಿದೆ.ಹಾಗಾಗಿ ಈ ಸಮಸ್ಯೆ ಶೀಘ್ರ ಬಗೆಹರಿಯಲಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿ ಬಿಟ್ಟರೆ ಎಚ್ಚರಿಕೆ! ಬೀದಿ ನಾಯಿಗಳಿಗೆ ಆಹಾರ ಹಾಕಲು ಜಾಗ ಗುರುತು

ಸಾಕು ನಾಯಿಯನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು…

ಬೀದಿ ನಾಯಿಗಳಿಗೆ ಪುನರ್ವಸತಿ : ಜಾಗ ನಿಗದಿ ಮಾಡಿ ಸೂಕ್ತ ವ್ಯವಸ್ಥೆಗೆ ಉಸ್ತುವಾರಿ ಸಚಿವರು ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಅರಣ್ಯ ಆರೋಗ್ಯ…