pashupathi
ರಾಜ್ಯ ವಾರ್ತೆ

ಶಿಕ್ಷಕರ ಮೊಬೈಲ್ ಬಳಕೆಗೆ ಕಡಿವಾಣ: ಮಹತ್ವದ ಆದೇಶ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಶಾಲಾ ವೇಳೆಯಲ್ಲಿ ಶಿಕ್ಷಕರ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

akshaya college

ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಶಾಲೆಗಳಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವುದು ತಿಳಿದುಬಂದಿದೆ.

ಶಾಲಾ ಮುಖ್ಯಶಿಕ್ಷಕರಿಗೆ ವಿನಾಯಿತಿ ನೀಡಲಾಗಿದ್ದರೂ ಸಹ ಅವರು ತಮ್ಮ ಬೋಧನಾ ಕಾರ್ಯದ ಅವಧಿಯಲ್ಲಿ ಮೊಬೈಲ್ಗಳನ್ನು ಬಳಸುವುದನ್ನು ನಿಷೇಧಿಸಿದೆ ಹಾಗೂ ಯಾವುದೇ ಶಾಲೆಗಳಲ್ಲಿ ಶಾಲಾ ವೇಳೆಯಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದು ಗಮನಕ್ಕೆ ಬಂದಲ್ಲಿ ಅಥವಾ ಈ ಸಂಬಂಧ ದೂರುಗಳು ಬಂದಲ್ಲಿ ಶಾಲೆಯ ಮುಖ್ಯ ಶಿಕ್ಷಕರೇ ಹೊಣೆಗಾರರಾಗುತ್ತಾರೆಂದು ತಿಳಿಸಿದೆ.

  1. ಮುಖ್ಯೋಪಾಧ್ಯಾಯರನ್ನು ಹೊರತುಪಡಿಸಿ ಇತರೆ ಎಲ್ಲಾ ಭೋದಕ ಸಿಬ್ಬಂದಿಯು ಪ್ರಾರ್ಥನೆ ಬಳಿಕ ತಮ್ಮ ಮೊಬೈಲ್ಗಳನ್ನು ಮುಖ್ಯೋಪಾಧ್ಯಾಯರ ಸುಪರ್ದಿಯಲ್ಲಿ ಹಸ್ತಾಂತರಿಸಬೇಕು.
  2. ತರಗತಿಗಳ ಅವಧಿಯಲ್ಲಿ ಮೊಬೈಲ್ ಬಳಕೆ ನಿಷಿದ್ಧವಾಗಿರಬೇಕು.
  3. ವಿದ್ಯಾರ್ಥಿಗಳಿಗೆ ಹೆಚ್ಚಿನ ಮೊಬೈಲ್ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲು ಸೂಚಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…