ರಾಜ್ಯ ವಾರ್ತೆ

ಇಂದಿನಿಂದ ಮೂರು ದಿನ ಆಶಾ ಕಾರ್ಯಕರ್ತೆಯರ ಮುಷ್ಕರ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಆಶಾ ಕಾರ್ಯಕರ್ತೆಯರು ಇಂದಿನಿಂದ ಮೂರು ದಿನಗಳ ಕಾಲ ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಹೊರತುಪಡಿಸಿ, ಪ್ರತಿಭಟನಾ ಅವಧಿಯಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ರಜೆ ತೆಗೆದುಕೊಳ್ಳುವುದನ್ನು ನಿರ್ಬಂಧಿಸಿ ಕರ್ನಾಟಕ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ.

chennai-shopping
maithri

ಅಧಿಸೂಚನೆಯಲ್ಲಿ, “ಜಿಲ್ಲಾ ಮಿತಿಯೊಳಗೆ ಕರ್ತವ್ಯಕ್ಕೆ ಗೈರುಹಾಜರಾದ ಆಶಾ ಕಾರ್ಯಕರ್ತರ ಬಗ್ಗೆ ಮಾಹಿತಿಯನ್ನು ಪ್ರತಿದಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಸಂಗ್ರಹಿಸಿ ಪ್ರತಿಭಟನೆಯ ಸಮಯದಲ್ಲಿ ಮಧ್ಯಾಹ್ನ 3 ಗಂಟೆಯೊಳಗೆ ಆಯುಕ್ತಾಲಯಕ್ಕೆ ಸಲ್ಲಿಸಬೇಕು” ಎಂದು ಸೂಚಿಸಲಾಗಿದೆ.

ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತರು ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts