ರಾಜ್ಯ ವಾರ್ತೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ

ಈ ಸುದ್ದಿಯನ್ನು ಶೇರ್ ಮಾಡಿ

ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಳಿಟ್ಟಿದ್ದಾರೆ.

akshaya college

ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ಅನುಶ್ರಿ ಹಾಗೂ ರೋಷನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ.

ಭಾವಿ ದಂಪತಿಗಳು ಮದುವೆಗೂ ಹಿಂದಿನ ದಿನ ಬುಧವಾರ (ಆ.27) ನಡೆದ ಹಳದಿ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ. ಹಳದಿ ಶಾಸ್ತ್ರದಲ್ಲಿ ಹಳದಿ ಉಡುಗೆಯಲ್ಲೇ ಕಾಣಿಸಿಕೊಂಡಿದ್ದಾರೆ. ಸುತ್ತಲೂ ಸೂರ್ಯಕಾಂತಿ ಹೂವಿನ ಅಲಂಕಾರ ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಹಳದಿ ಶಾಸ್ತ್ರದ ವೇಳೆ ಅನುಶ್ರೀ – ರೋಷನ್ ಸು ಫ್ರಂ ಸೋ ಚಿತ್ರದ `ಬಂದರೋ ಬಂದರೋ ಬಾವ ಬಂದರೋ’ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts