ಬೆಂಗಳೂರು: ನೇಪಾಳದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.ಇದೀಗ ಅಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸರ್ಕಾರ ಮುಖ್ಯಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ
ಕನ್ನಡಿಗರು ನೇಪಾಳದಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಕನ್ನಡಿಗರನ್ನ ಕರೆತರುವ ಪ್ರಯತ್ನವನ್ನು ಸರ್ಕಾರ ಮಾಡಿದೆ. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೂ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯ ಅನಿವಾಸಿ ಭಾರತೀಯ ಸಮಿತಿಯು ನೇಪಾಳದಲ್ಲಿ ಸಿಲುಕಿರುವವರ ಪತ್ತೆಗೆ ಯತ್ನ ನಡೆಸಿದೆ.
ಭಾರತೀಯ ರಾಯಭಾರಿ ಕಚೇರಿಗೆ ಪತ್ರ ಬರೆದಿರುವ ರಾಜ್ಯ ಅನಿವಾಸಿ ಭಾರತೀಯ ಸಮಿತಿ, ಕನ್ನಡಿಗರ ಮಾಹಿತಿ ಪಡೆದು ಖುದ್ದಾಗಿ ಸಂಪರ್ಕಿಸಲು ಮುಂದಾಗಿದೆ. ಈ ಬಗ್ಗೆ ಕರ್ನಾಟಕ ಅನಿವಾಸಿ ಭಾರತೀಯ ಸಮೀತಿ ಉಪಾಧ್ಯಕ್ಷೆ ಆರತಿ ಕೃಷ್ಣ ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮಗಳ ಮೇಲಿನ ಸರ್ಕಾರದ ನಿಷೇಧದ ವಿರುದ್ಧ ನೇಪಾಳದಲ್ಲಿ ಯುವಕರು ಸೋಮವಾರ ಹಿಂಸಾತ್ಮಕ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ, ಪೊಲೀಸರ ಬಲಪ್ರಯೋಗದಿಂದಾಗಿ ಕನಿಷ್ಠ 19 ಜನರು ಸಾವನ್ನಪ್ಪಿದರು ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡರು.