ರಾಜ್ಯ ವಾರ್ತೆ

ನೇಪಾಳದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ!!

Saraswathi

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ನೇಪಾಳದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.ಇದೀಗ ಅಲ್ಲಿ  ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸರ್ಕಾರ ಮುಖ್ಯಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ

maithri

ಕನ್ನಡಿಗರು ನೇಪಾಳದಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಕನ್ನಡಿಗರನ್ನ ಕರೆತರುವ ಪ್ರಯತ್ನವನ್ನು ಸರ್ಕಾರ ಮಾಡಿದೆ. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೂ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯ ಅನಿವಾಸಿ ಭಾರತೀಯ ಸಮಿತಿಯು ನೇಪಾಳದಲ್ಲಿ ಸಿಲುಕಿರುವವರ ಪತ್ತೆಗೆ ಯತ್ನ ನಡೆಸಿದೆ.

ಭಾರತೀಯ ರಾಯಭಾರಿ ಕಚೇರಿಗೆ ಪತ್ರ ಬರೆದಿರುವ ರಾಜ್ಯ ಅನಿವಾಸಿ ಭಾರತೀಯ ಸಮಿತಿ, ಕನ್ನಡಿಗರ ಮಾಹಿತಿ ಪಡೆದು ಖುದ್ದಾಗಿ ಸಂಪರ್ಕಿಸಲು ಮುಂದಾಗಿದೆ. ಈ ಬಗ್ಗೆ ಕರ್ನಾಟಕ ಅನಿವಾಸಿ ಭಾರತೀಯ ಸಮೀತಿ ಉಪಾಧ್ಯಕ್ಷೆ ಆರತಿ ಕೃಷ್ಣ ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೇಲಿನ ಸರ್ಕಾರದ ನಿಷೇಧದ ವಿರುದ್ಧ ನೇಪಾಳದಲ್ಲಿ ಯುವಕರು ಸೋಮವಾರ ಹಿಂಸಾತ್ಮಕ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ, ಪೊಲೀಸರ ಬಲಪ್ರಯೋಗದಿಂದಾಗಿ ಕನಿಷ್ಠ 19 ಜನರು ಸಾವನ್ನಪ್ಪಿದರು ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇವಳ ಪಕ್ಕದಲ್ಲಿ ಸರಕಾರಿ ಶಾಲೆ: ಬಿಸಿಯೂಟದ ಮೊಟ್ಟೆಗೆ ಕುತ್ತು! ವಿದ್ಯಾರ್ಥಿಗಳಿಂದ ಶಾಲೆ ತೊರೆಯುವ ಸಾಮೂಹಿಕ ಬೆದರಿಕೆ!!

ಮಧ್ಯಾಹ್ನದ ಬಿಸಿ ಊಟದ ಯೋಜನೆ ಹಿನ್ನೆಲೆಯಲ್ಲಿ ದೇವಾಲಯದ ಪಕ್ಕದಲ್ಲಿರುವ ಸರ್ಕಾರಿ ಶಾಲೆಯೊಂದರ…