ರಾಜ್ಯ ವಾರ್ತೆ

ಅತಿಥಿ ಶಿಕ್ಷಕರಿಗೆ ಗೌರವಧನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ!!

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದ್ದು ಗೌರವಧನ ಪಾವತಿಗೆ ಅನುದಾನವನ್ನು ಬಿಡುಗಡೆಗೊಳಿಸಿದೆ.

akshaya college

2025-26 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನೇಮಕವಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಪಾವತಿಸಲು 2025-26 ನೇ ಸಾಲಿನ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಜೂನ್-2025 ರಿಂದ ಸೆಪ್ಟಂಬರ್-2025 ರವರೆಗೆ ರೂ. 20416.20 ಲಕ್ಷಗಳನ್ನು ಹಾಗೂ ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಜೂನ್-2025 ರಿಂದ ನವೆಂಬರ್-2025 ರವರೆಗೆ ರೂ.7124.25 ಲಕ್ಷಗಳ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಲಾಗಿದೆ.

ಆರ್ಥಿಕ ಇಲಾಖೆಯಿಂದ ಅನುದಾನವನ್ನು ನೇರವಾಗಿ ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗೆ ಬಿಡುಗಡೆಯಾಗಿದ್ದು, ಕೂಡಲೇ ತಾಲ್ಲೂಕು ಪಂಚಾಯಿತಿಯಿಂದ ಅನುದಾನವನ್ನು ಡಿಡಿಓ ಲಾಗಿನ್ ಗೆ ಅಪ್ ಲೋಡ್ ಮಾಡಿಸಿಕೊಂಡು, ತಕ್ಷಣ ಅತಿಥಿ ಶಿಕ್ಷಕರಿಗೆ ನೀಡಬೇಕೆಂದು ಸೂಚಿಸಲಾಗಿದೆ. ಅಲ್ಲದೆ ಈ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಕಾಲಕಾಲಕ್ಕೆ ಸೂಕ್ತ ಮೇಲುಸ್ತುವಾರಿ ಮಾಡುವುದರ ಜೊತೆಗೆ ಈ ಕಛೇರಿಗೆ ಅನುಪಾಲನಾ ವರದಿಯನ್ನು ಸಲ್ಲಿಸುವುದು ಎಂದು ಸರ್ಕಾರ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts