pashupathi
ರಾಜ್ಯ ವಾರ್ತೆ

ಮತಗಳ್ಳತನ ಆರೋಪ: ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಚುನಾವಣಾ ಆಯೋಗ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ರಾಹುಲ್ ಗಾಂಧಿ ಮಾಡಿರುವ ಮತಗಳ್ಳತನ ಆರೋಪಕ್ಕೆ ಚುನಾವಣಾ ಆಯೋಗ ಅಂಕಿ ಅಂಶ ಸಹಿತ ತಿರುಗೇಟು ನೀಡಿದೆ.

akshaya college

ಗುರುವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ, ಆಳಂದಲ್ಲಿ 6018 ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಎಲ್ಲಾ ಹೆಸರುಗಳನ್ನು ಕರ್ನಾಟಕದ ಮೊಬೈಲ್ ಸಂಖ್ಯೆಯಿಂದಲೇ ಡಿಲೀಟ್ ಮಾಡಲಾಗಿದೆ. ಎಲ್ಲೋ ಕುಳಿತು ಈ ಹೆಸರುಗಳನ್ನು ತೆಗೆಸಲಾಗಿದೆ. ನಾವು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಚುನಾವಣಾ ಆಯೋಗ, ಸಾರ್ವಜನಿಕರು ಆನ್​ಲೈನ್​​ನಲ್ಲಿ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದೀಗ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ರಾಹುಲ್ ಗಾಂಧಿ ಆರೋಪಕ್ಕೆ ಅಂಕಿ ಸಂಖ್ಯೆ ಸಹಿತ ತಿರುಗೇಟು ನೀಡಿದೆ.

2023ರ ಫೆಬ್ರವರಿ 21ರಂದು ಕ್ಷೇತ್ರ ಚುನಾವಣಾ ನೋಂದಣಾಧಿಕಾರಿ ಎಫ್‌ಐಆರ್ ದಾಖಲಿಸಿದ್ದರು. ಫಾರ್ಮ್ 7 ದುರುಪಯೋಗ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು ಎಂದು ಚುನಾವಣಾ ಆಯೋಗ ತಿಳಿಸಿದೆ.

ಎನ್‌ವಿಎಸ್ಪಿ (NVSP), ವಿಹೆಎ (VHA), ಗರುಡ (GARUDA) ಆ್ಯಪ್‌ಗಳ ಮೂಲಕ ಮತದಾರರ ಹೆಸರನ್ನು ಡಿಲೀಟ್ ಮಾಡಲು 6,018 ಅರ್ಜಿಗಳು ಬಂದಿದ್ದವು. ಪರಿಶೀಲನೆಯ ನಂತರ ಕೇವಲ 24 ಅರ್ಜಿಗಳು ನಿಜವಾಗಿದ್ದವು. ಉಳಿದ 5,994 ಅರ್ಜಿಗಳನ್ನು ತಿರಸ್ಕರಿಸಲಾಯಿತು ಎಂದು ಆಯೋಗ ತಿಳಿಸಿದೆ.

ಆ ಅರ್ಜಿಗಳನ್ನು ತಕ್ಷಣವೇ ಡಿಲೀಟ್ ಮಾಡಿರಲಿಲ್ಲ. ಬದಲಾಗಿ ದೂರು ದಾಖಲಿಸಿ ತನಿಖೆಗೆ ಮುಂದಾಗಿದ್ದೆವು. 2023ರ ಸೆಪ್ಟೆಂಬರ್ 6ರಂದು ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತರು ಲಭ್ಯವಿದ್ದ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು ಮತ್ತು ನಂತರ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹಸ್ತಾಂತರಿಸಿದ್ದರು ಎಂದು ತಿಳಿಸಿದೆ.

ತನಿಖಾ ತಂಡಕ್ಕೆ ಒದಗಿಸಿದ ಮಾಹಿತಿಯಲ್ಲಿ ಫಾರ್ಮ್ ರೆಫರೆನ್ಸ್ ಸಂಖ್ಯೆ, ಆಕ್ಷೇಪಣೆ ಸಲ್ಲಿಸಿದವರ ಹೆಸರು, EPIC ಸಂಖ್ಯೆ, ಲಾಗಿನ್‌ಗೆ ಬಳಸಿದ ಮೊಬೈಲ್ ಸಂಖ್ಯೆ, IP ವಿಳಾಸ, ಅರ್ಜಿ ಸಲ್ಲಿಸಿದ ದಿನಾಂಕ-ಸಮಯ ಮತ್ತು ಸ್ಥಳ ಮಾಹಿತಿ ಸೇರಿವೆ ಎಂದೂ ಆಯೋಗ ಸ್ಪಷ್ಟಪಡಿಸಿದೆ.

ಚುನಾವಣಾ ಆಯೋಗವು ತನಿಖೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಒದಗಿಸಿದ್ದಾಗಿ ಸ್ಪಷ್ಟಪಡಿಸಿದ್ದು, ರಾಹುಲ್ ಗಾಂಧಿ ಅವರ ಆರೋಪಕ್ಕೆ ತಿರುಗೇಟು ನೀಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…