pashupathi
ರಾಜ್ಯ ವಾರ್ತೆ

ಜಿಎಸ್ಟಿ ಪ್ರಭಾವ: ನಂದಿನಿ ಉತ್ಪನ್ನಗಳ ದರ ಇಳಿಕೆ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಆ ಮೂಲಕ ರಾಜ್ಯದ ಜನರಿಗೆ ಕೆಎಂಎಫ್ ಗುಡ್ ನ್ಯೂಸ್ ಕೊಟ್ಟಿದೆ. ಆದರೆ ಅಧಿಕೃತ ಆದೇಶ ಬಾಕಿಯಿದೆ.

akshaya college

ಜಿಎಸ್ಟಿ ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ಸಜ್ಜಾಗಿರುವ ಕೆಎಂಎಫ್ ಈ ಬಗ್ಗೆ ಶುಕ್ರವಾರ ಕೆಎಂಎಫ್ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧಾರ ಮಾಡಲಾಗಿದೆ. ಮೊಸರಿನ ದರ ಲೀಟರ್ಗೆ 4 ರೂ. ಇಳಿಕೆ ನಿರೀಕ್ಷೆ ಇದೆ.

ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಿದೆ. 2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಲಾಗಿತ್ತು.

2022 ರಲ್ಲಿ ಜಿಎಸ್ಟಿಯನ್ನ ಶೇಕಡಾ 22ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದ್ದು, ಇದು ಸೆ. 22ರಿಂದ ಜಾರಿಗೆ ಬರಲಿದೆ. ಆ ಮೂಲಕ ಗ್ರಾಹಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…