pashupathi
ರಾಜ್ಯ ವಾರ್ತೆ

ದೀಪಾವಳಿಗೆ ಹಸಿರು ಪಟಾಕಿ; ತಪ್ಪಿದರೆ ದಂಡ – ಈಶ್ವರ್ ಖಂಡ್ರೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು, ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸೆನ್ಸ್ ಕ್ಯಾನ್ಸಲ್‌ ಮಾಡಲಾಗುವುದು ಸಚಿವ ಈಶ್ವ‌ರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

akshaya college

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದ್ದು, ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಹಸಿರು ಪಟಾಕಿ ಬಿಟ್ಟು ಬೇರೆಯದಕ್ಕೆ ಅವಕಾಶ ನೀಡಬಾರದು. ಮಳಿಗೆಗಳಿಗೆ ಹೋಗಿ ಪರಿಶೀಲನೆ ಮಾಡಬೇಕು. ಪರಿಸರ ಸ್ನೇಹಿ ಪಟಾಕಿ ಮಾರುತ್ತೇವೆ ಎಂದು ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ.

ಯಾರಾದರೂ ನಿಯಮ ಉಲ್ಲಂಘನೆ ಮಾಡಿದರೆ ಪಟಾಕಿ ಮಾರಿದರೆ ಅವರ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಸಚಿವರು ವಿಧಾನಸೌಧದಲ್ಲಿ ಮಾತನಾಡುತ್ತಾ ಹೇಳಿದರು

 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…