pashupathi
ರಾಜ್ಯ ವಾರ್ತೆ

ಅಲ್ಯುಮಿನಿಯಂ ಪಾತ್ರೆಗಳ ಬಳಕೆಗೆ ಕಡಿವಾಣ: ಸರಕಾರ ಸೂಚನೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಬಳಸಲಾಗುತ್ತಿರುವ ಅಲ್ಯುಮಿನಿಯಂ ಪಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸುವತ್ತ ರಾಜ್ಯ ಸರಕಾರ ದೃಢ ಹೆಜ್ಜೆಯಿಟ್ಟಿದ್ದು, ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಅಲ್ಯುಮಿನಿಯಂ ಪಾತ್ರೆಗಳ ಬಳಕೆಗೆ ಕಡಿವಾಣ ಹಾಕಿದೆ.

akshaya college

ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ ಆಧುನಿಕ ಅಡುಗೆ ಪರಿಕರಗಳನ್ನು ಕೊಂಡುಕೊಳ್ಳಲು 21.55 ಕೋ.ರೂ. ಅನುದಾನ ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಅಲ್ಯುಮಿನಿಯಂ ಪಾತ್ರೆ ಕೊಂಡುಕೊಳ್ಳಬಾರದು ಎಂದು ಸೂಚಿಸಿದೆ.

ಮಧ್ಯಾಹ್ನದ ಉಪಾಹಾರ ಯೋಜನೆಯಡಿ ಶಾಲೆಗಳಲ್ಲಿ ಆಹಾರವನ್ನು ತಯಾರಿಸುವಾಗ ಅಲ್ಯುಮಿನಿಯಂ ಪಾತ್ರೆಗಳನ್ನು ದೀರ್ಘಾವಧಿಯಲ್ಲಿ ಬಳಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಅಲ್ಯುಮಿನಿಯಂ ಪಾತ್ರೆಗಳ ಬಳಕೆಯ ಪ್ರಮಾಣವನ್ನು ಕಡಿಮೆ ಮಾಡುವಂತೆ ಕೇಂದ್ರ ಸರಕಾರ ಸೂಚಿಸಿತ್ತು.

 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…