ಪುತ್ತೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 20ರಂದು ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ವಿವರವನ್ನು ಮುಖ್ಯಮಂತ್ರಿಗಳ ಕಚೇರಿ ಬಿಡುಗಡೆ ಮಾಡಿದೆ.
ಅ. 20ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ vt-snp ಮೂಲಕ ಮಂಗಳೂರಿಗೆ ಹೊರಡಲಿದ್ದಾರೆ. 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ರಸ್ತೆ ಮೂಲಕ ಪುತ್ತೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.10ಕ್ಕೆ ಪುತ್ತೂರು ತಾಲೂಕು ಕ್ರೀಡಾಂಗಣಕ್ಕೆ ತಲುಪಲಿದ್ದಾರೆ.
ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ವತಿಯಿಂದ ಆಯೋಜಿಸಿರುವ ಅಶೋಕ ಜನಮನ 2025 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಸಂಜೆ 4 ಗಂಟೆಗೆ ರಸ್ತೆ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ, 5.10ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರವಾಸ ಕಾರ್ಯಕ್ರಮದ ವಿವರ ತಿಳಿಸಿದೆ.

























