ರಾಜ್ಯ ವಾರ್ತೆ

ಆರ್.ಎಸ್.ಎಸ್. ನಿರ್ಬಂಧ: ರಾಜ್ಯ ಸರಕಾರಕ್ಕೆ ಹಿನ್ನಡೆ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ.

core technologies

ಪಥಸಂಚಲನ ನಿರ್ಬಂಧಿಸುವ ಸಂಬಂಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್​ಎಸ್​​ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ನ ಧಾರವಾಡ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್​ಗೆ ನೋಟಿಸ್ ನೀಡಿದೆ.

akshaya college

ನಿರ್ಬಂಧ ಬಗ್ಗೆ ಹೈಕೋರ್ಟ್ ಹೇಳಿದ್ದೇನು?

2025 ರ ಅ.18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್​ಎಸ್​​ಎಸ್ ಪ್ರಶ್ನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್​ನ ಧಾರವಾಡ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ಅಭಿಪ್ರಾಯಪಟ್ಟಿದೆ.

ಆರ್​ಎಸ್​ಎಸ್ ಪಥಸಂಚಲನದ ಭವಿಷ್ಯ ಏನು?

ಸದ್ಯ ಆರ್​ಎಸ್​ಎಸ್ ಚಟುವಟಿಕೆ ಸಂಬಂಧ ಪೊಲೀಸ್ ಕಾಯ್ದೆಯಡಿ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೆ, ಅತ್ತ ಕಲಬುರಗಿ ಚಿತ್ತಾಪುರದ ಆರ್​ಎಸ್​ಎಸ್ ಪಥಸಂಚಲನ ವಿಚಾರವಾಗಿ ಹೈಕೋರ್ಟ್​ನ ಕಲಬುರಗಿ ಪೀಠ ಈಗಾಗಲೇ ವಿಚಾರಣೆ ನಡೆಸಿದ್ದು, ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ಅಕ್ಟೋಬರ್ 30ರಂದು ವರದಿ ನೀಡುವಂತೆ ಕೋರ್ಟ್ ತಿಳಿಸಿದೆ. ಸರ್ಕಾರ ಸಲ್ಲಿರುವ ವರದಿಯ ಆಧಾರದಲ್ಲಿ ತೀರ್ಪು ನೀಡಬೇಕಿದೆ. ಆದರೆ, ಈಗ ಒಟ್ಟಾರೆಯಾಗಿ ಸರ್ಕಾರದ ಆದೇಶಕ್ಕೆ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿರುವುದರಿಂದ ಇದು ಕಲಬುರಗಿ ಪೀಠದ ಆದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts