ರಾಜ್ಯದ್ಯಂತ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧಿಸಿ (Plastic Ban) ಮತ್ತು ಸಭೆ ಸಮಾರಂಭಗಳಲ್ಲಿ ಕೆಎಂಎಫ್ ನಂದಿನಿ ತಿನಿಸುಗಳನ್ನು ಬಳಸುವಂತೆ ಸಿದ್ದರಾಮಯ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವುದು.
ಮಾನ್ಯ ಮುಖ್ಯಮಂತ್ರಿಗಳು ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಸಭೆ ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ.ಎಂ.ಎಫ್. ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಸೂಚಿಸಿದೆ ಆದೇಶ ಹೊರಡಿಸಿದೆ.
ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧಿಸಿ (Plastic Ban) ಮತ್ತು ಸಭೆ ಸಮಾರಂಭಗಳಲ್ಲಿ ಕೆಎಂಎಫ್ ನಂದಿನಿ ತಿನಿಸುಗಳನ್ನು ಬಳಸುವಂತೆ ಸಿದ್ದರಾಮಯ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
























