ಬೆಂಗಳೂರು: ಪೋಕೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಹಿನ್ನಡೆಯಾಗಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಇದೀಗ ಹೈಕೋರ್ಟ್ ನಿರಾಕರಿಸಿದೆ.
ಇದೀಗ ಹೈಕೋರ್ಟ್ ಆದೇಶದಿಂದಾಗಿ ಪೋಕೋ ಪ್ರಕರಣಗಳ ತ್ವರಿತ ವಿಚಾರಣಾ ನ್ಯಾಯಾಲಯದ ಮುಂದೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕಾಗುತ್ತದೆ.
ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಬಿಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಬಹುದು. ಅಂತಹ ಮನವಿಯನ್ನು ಪರಿಗಣಿಸಲು ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ.
ಫೆಬ್ರವರಿ 28ರಂದು ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಈಗ ಹೈಕೋರ್ಟ್ ಆದೇಶದ ಕಾರಣದಿಂದ ತ್ವರಿತ ನ್ಯಾಯಾಲಯವು ಹೊಸ ದಿನಾಂಕ ನಿಗದಿಪಡಿಸಿ ಸಮನ್ಸ್ ಜಾರಿಗೊಳಿಸಲಿದೆ.
ತಮ್ಮ ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅವರು 17 ವರ್ಷದ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಮಾರ್ಚ್ ನಲ್ಲಿ ಆರೋಪ ಕೇಳಿ ಬಂದಿತ್ತು. ಬಾಲಕಿಯ ತಾಯಿಯ ಆರೋಪದ ಬಳಿಕ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


























