ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ರಾಜ್ಯದ ಗ್ರಾಹಕರಿಗೆ ವಿದ್ಯುತ್ ದುಬಾರಿ ಆಗಲಿದೆ.
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಮುಂದಿನ ಹಣಕಾಸು ವರ್ಷದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿದ್ದು, ಗ್ರಾಹಕರು ವಿದ್ಯುತ್ ಬಳಕೆಗೆ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ. ಈ ಹೆಚ್ಚಳವನ್ನು ‘ವಿದ್ಯುತ್ ದರ ಪರಿಷ್ಕರಣೆ’ ಎಂದು ಕರೆಯದೆ, ‘ಟಾಪ್-ಅಪ್’ ಅಥವಾ ‘ಟೂ-ಅಪ್’ ಎಂದು ಉಲ್ಲೇಖಿಸಲಾಗುತ್ತದೆ ಎಂದು ಆಯೋಗ ಸ್ಪಷ್ಟಪಡಿಸಿದೆ.
ಮಾರ್ಚ್ 2025ರಲ್ಲಿ ಕೆಇಆರ್‌ಸಿ ವಿದ್ಯುತ್ ದರ ಪರಿಷ್ಕರಣೆ ಘೋಷಿಸಿದಾಗ, ಮೂರು ವರ್ಷಗಳ ಕಾಲ ಸುಂಕಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿತ್ತು. ಆದರೆ ಮಾರುಕಟ್ಟೆಯ ಏರಿಳಿತಗಳು ಮತ್ತು ವಿದ್ಯುತ್ ಸರಬರಾಜು ಕಂಪನಿಗಳಲ್ಲಿರುವ (ಎಸ್ಕಾಮ್‌ಗಳು) ಬಾಕಿಗಳನ್ನು ಆಧರಿಸಿ ಇದೀಗ ವಾರ್ಷಿಕವಾಗಿ ಸಣ್ಣ ಪ್ರಮಾಣದ ತಿದ್ದುಪಡಿ ಮಾಡಲಾಗುತ್ತಿದೆ. ಇದನ್ನೇ ಟಾಪ್-ಅಪ್ ಎಂದು ಕರೆಯಲಾಗುತ್ತದೆ ಎಂದು ಕೆಇಆರ್‌ಸಿ ಅಧ್ಯಕ್ಷ ಪಿ. ರವಿ ಕುಮಾರ್ ತಿಳಿಸಿದ್ದಾರೆ.



























