tamanvi
ರಾಜ್ಯ ವಾರ್ತೆ

ಪೊಲೀಸ್ ಸಿಬ್ಬಂದಿಗೆ ವಿಶೇಷ ರಜೆ: ರಾಜ್ಯ ಸರ್ಕಾರದ ಮಹತ್ವದ ಆದೇಶ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದ ಪೊಲೀಸ್‌ ಸಿಬ್ಬಂದಿಗೆ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ಕಾನ್ಸ್‌ಟೇಬಲ್‌ನಿಂದ ಎಎಸ್‌ಐ (ಸಹಾಯಕ ಉಪನಿರೀಕ್ಷಕ) ಹುದ್ದೆಯವರೆಗೆ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಅವರ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿಶೇಷ ರಜೆ ಕಡ್ಡಾಯವಾಗಿ ಮಂಜೂರು ಮಾಡಬೇಕು ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

maithri

ರಜೆ ನಿರಾಕರಣೆ ಬೇಡ

ಹೊರಡಿಸಿರುವ ಆದೇಶದ ಪ್ರಕಾರ, ಅರ್ಜಿ ಸಲ್ಲಿಸಿದ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ರಜೆ ನಿರಾಕರಿಸಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಕರ್ತವ್ಯ ನಿರ್ವಹಣೆಯಲ್ಲಿ ಸದಾ ಒತ್ತಡದ ನಡುವೆ ಕೆಲಸ ಮಾಡುವ ಸಿಬ್ಬಂದಿಗೆ ವೈಯಕ್ತಿಕ ಜೀವನಕ್ಕೆ ಸಮಯ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮಾನಸಿಕ ಒತ್ತಡ ಕಡಿಮೆ ಮಾಡುವ ಉದ್ದೇಶ

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಗೆ ದಿನನಿತ್ಯ ಕಠಿಣ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಪೊಲೀಸರಿಗೆ ವಿಶೇಷ ದಿನಗಳಲ್ಲಿ ಕುಟುಂಬದೊಂದಿಗೆ ಸಮಯ ಕಳೆಯುವ ಅವಕಾಶ ಕಲ್ಪಿಸುವುದು ಮಹತ್ವದ್ದಾಗಿದೆ. ಇದರಿಂದ ಮನೋಬಲ ಹೆಚ್ಚಾಗಿ, ಕಾರ್ಯಕ್ಷಮತೆ ವೃದ್ಧಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುತ್ತೋಲೆಗೆ ಪೊಲೀಸ್‌ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿಬ್ಬಂದಿಗಳು ಸರ್ಕಾರದ ಈ ಮಾನವೀಯ ಕ್ರಮಕ್ಕೆ ಸಂತಸ ವ್ಯಕ್ತಪಡಿಸಿದ್ದು, ಕರ್ತವ್ಯ ಮತ್ತು ವೈಯಕ್ತಿಕ ಬದುಕಿನ ನಡುವೆ ಸಮತೋಲನ ಸಾಧಿಸಲು ಇದು ಸಹಕಾರಿ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ಈ ನಿರ್ಧಾರದಿಂದ ಪೊಲೀಸ್‌ ಪಡೆಯ ಬದ್ಧತೆ ಮತ್ತಷ್ಟು ಬಲವಾಗುವ ನಿರೀಕ್ಷೆ ವ್ಯಕ್ತವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಂಗಳೂರು: ಜೈನ್ ಆಹಾರೋತ್ಸವದಲ್ಲಿ ಸಾಂಪ್ರದಾಯಿಕ ಖಾದ್ಯಗಳ ಸವಿರುಚಿ, ವಿದ್ಯಾರ್ಥಿವೇತನ ವಿತರಣೆ

ಬೆಂಗಳೂರು: ಬಿಎಸ್‌ಎಂ ಜೈನ್ ಅಸೋಸಿಯೇಷನ್ (ರಿ) ವತಿಯಿಂದ ಬೆಂಗಳೂರಿನ ವಿಜಯನಗರದಲ್ಲಿ ಭಾನುವಾರ…