ರಾಜ್ಯ ವಾರ್ತೆ

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಗದಗ ಶಾಸಕ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ.

maithri

11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5 ಲಕ್ಷ ರೂ. ಕಮಿಷನ್ ಪಡೆಯುವಾಗ ಶಾಸಕ ಸೇರಿದಂತೆ ಪಿಎಗಳಾದ ಮಂಜುನಾಥ್ ಮತ್ತು ಗುರು ಸಿಕ್ಕಿಬಿದ್ದಿದ್ದು, ಮೂವರನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ.

ಸಣ್ಣ ನೀರಾವರಿ ಇಲಾಖೆಯ ಕ್ಲಾಸ್ 1 ಗುತ್ತಿಗೆದಾರ ವಿಜಯ್​ಗೆ ಲಂಚ ನೀಡಲು ಒತ್ತಾಯಿಸಲಾಗಿದೆ. ರಸ್ತೆ ಬದಿ ತಡೆಗೋಡೆ ನಿರ್ಮಾಣದ ಕಾಮಗಾರಿ ವಹಿಸಲು 11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಡಲಾಗಿದೆ. ಆದರೆ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಶಾಸಕ ಚಂದ್ರು ಮತ್ತು ಇಬ್ಬರು ಪಿಎಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಚಂದ್ರು ಲಮಾಣಿಗೆ ಸೇರಿದ ಬಾಲಾಜಿ ಆಸ್ಪತ್ರೆ ಮೇಲೂ ಲೋಕಾಯುಕ್ತ ದಾಳಿ ಮಾಡಿ ಪರಿಶೀಲನೆ ಮಾಡಿದೆ. ಲೋಕಾಯುಕ್ತ ಎಸ್​ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.

ಇದು ಗುತ್ತಿಗೆದಾರರ ಹೋರಾಟಕ್ಕೆ ಸಿಕ್ಕಿರುವ ಜಯ: ಮಂಜುನಾಥ್

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್​ ಹೇಳಿಕೆ ನೀಡಿದ್ದು, ಶಾಸಕರೇ ಈ ರೀತಿಯ ಕೆಲಸಕ್ಕೆ ಇಳಿಯಬಾರದು. ನಾವು ಮಾಡುತ್ತಿದ್ದ ಕಮಿಷನ್​ ಆರೋಪಕ್ಕೆ ಸಾಕ್ಷಿ ಸಿಕ್ಕಂತೆ ಆಗಿದೆ. ಇದು ಗುತ್ತಿಗೆದಾರರ ಹೋರಾಟಕ್ಕೆ ಸಿಕ್ಕಿರುವ ಜಯ. ದೂರುದಾರ ಗುತ್ತಿಗೆದಾರನ ಬೆಂಬಲಕ್ಕೆ ನಮ್ಮ ಸಂಘ ಇರಲಿದೆ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇವಳ ಪಕ್ಕದಲ್ಲಿ ಸರಕಾರಿ ಶಾಲೆ: ಬಿಸಿಯೂಟದ ಮೊಟ್ಟೆಗೆ ಕುತ್ತು! ವಿದ್ಯಾರ್ಥಿಗಳಿಂದ ಶಾಲೆ ತೊರೆಯುವ ಸಾಮೂಹಿಕ ಬೆದರಿಕೆ!!

ಮಧ್ಯಾಹ್ನದ ಬಿಸಿ ಊಟದ ಯೋಜನೆ ಹಿನ್ನೆಲೆಯಲ್ಲಿ ದೇವಾಲಯದ ಪಕ್ಕದಲ್ಲಿರುವ ಸರ್ಕಾರಿ ಶಾಲೆಯೊಂದರ…