ರಾಜ್ಯ ವಾರ್ತೆ

ಪಹಣಿ (ಆರ್.ಟಿ.ಸಿ.) ಬದಲಾವಣೆ ಇನ್ನು ಸುಲಭ; ಮೊಬೈಲ್’ನಲ್ಲೇ ಮಾಡಿ ಸ್ವಯಂಚಾಲಿತ ಖಾತೆ ಬದಲಾವಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಭೂ ದಾಖಲೆ ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಸ್ವಯಂ ಚಾಲಿತ (ಆಟೋ) ಮ್ಯುಟೇಶನ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

chennai-shopping
maithri

ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಆಟೋ ಮ್ಯುಟೇಶನ್ ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆನ್‌ಲೈನ್ ಮೂಲಕ ಖಾತೆ ಬದಲಾವಣೆಗೆ ಮನವಿ ಸಲ್ಲಿಸಿದರೆ 7 ದಿನಗಳ ನೋಟಿಸ್ ಅವಧಿ ಇರುತ್ತದೆ. ಈ ಅವಧಿಯಲ್ಲಿ ಯಾರಾದರೂ ಭೂಮಿ ತಂತ್ರಾಂಶದ ಮೂಲಕ ತಕರಾರು ಸಲ್ಲಿಸಬಹುದು. ಯಾರೂ ತಕರಾರು ಸಲ್ಲಿಸದಿದ್ದರೆ 8ನೇ ದಿನ ಸ್ವಯಂ ಚಾಲಿತವಾಗಿ ಖಾತೆ ಬದಲಾವಣೆ ಪೂರ್ಣಗೊಳ್ಳಲಿದೆ ಎಂದರು.

ನೋಂದಣಿಯೇತರ ಪ್ರಕರಣಗಳಿಗೆ 15 ದಿನಗಳ ನೋಟಿಸ್ ಅವಧಿ ನೀಡಲಾಗಿದ್ದು, ಈ ಅವಧಿಯಲ್ಲಿ ತಕರಾರು ಸಲ್ಲಿಸಲು ಅವಕಾಶ ಇರುತ್ತದೆ. ಯಾವುದೇ ಆಕ್ಷೇಪಣೆ ಇಲ್ಲದಿದ್ದರೆ 16ನೇ ದಿನ ಖಾತೆ ಬದಲಾವಣೆ ಸ್ವಯಂ ಚಾಲಿತವಾಗಿ ಜಾರಿಯಾಗುತ್ತದೆ ಎಂದು ಸಚಿವರು ವಿವರಿಸಿದರು.

2024ರ ಏಪ್ರಿಲ್ 1ರಿಂದ 2026ರ ಫೆಬ್ರವರಿ 20ರವರೆಗೆ ಒಟ್ಟು 35,11,987 ಖಾತೆ ಬದಲಾವಣೆಗಳನ್ನು ಸ್ವಯಂ ಚಾಲಿತವಾಗಿ ಮಾಡಲಾಗಿದೆ. ಕೇವಲ 5,207 ಪ್ರಕರಣಗಳಲ್ಲಿ ಮಾತ್ರ ತಕರಾರು ದಾಖಲಾಗಿದ್ದು, ಒಟ್ಟು ಮ್ಯುಟೇಶನ್ ಪ್ರಕರಣಗಳಲ್ಲಿ ಶೇ. 98ರಷ್ಟು ಸ್ವಯಂ ಚಾಲಿತವಾಗಿ ಪೂರ್ಣಗೊಂಡಿವೆ. ತಕರಾರು ದಾಖಲಾದ ಪ್ರಕರಣಗಳನ್ನೂ 60 ದಿನಗಳೊಳಗೆ ಇತ್ಯರ್ಥಗೊಳಿಸಿ ಆದೇಶ ಹೊರಡಿಸಲಾಗುತ್ತಿದೆ ಎಂದು ತಿಳಿಸಿದರು.

ಮನೆಬಾಗಿಲಿಗೆ ಸೇವೆ
ಸ್ವಯಂ ಚಾಲಿತ ಮ್ಯುಟೇಶನ್ ಮೂಲಕ ಜನಪರ ಹಾಗೂ ಸರಳ ಆಡಳಿತವನ್ನು ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸುವ ಸರ್ಕಾರದ ಉದ್ದೇಶ ಈಡೇರಿದೆ ಎಂದು ಸಚಿವರು ಹೇಳಿದರು. ಕಳೆದ ಎರಡೂವರೆ ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಹಂತ ಹಂತವಾಗಿ ಸುಧಾರಣೆಗಳನ್ನು ತರಲಾಗುತ್ತಿದ್ದು, ಅದರಲ್ಲಿ ಈ ವ್ಯವಸ್ಥೆ ಮಹತ್ವದ ಹೆಜ್ಜೆಯಾಗಿದೆ ಎಂದು ಉಲ್ಲೇಖಿಸಿದರು.

ಈ ಸೇವೆಯನ್ನು ಒಂದು ತಿಂಗಳಿನಿಂದ ಮಂಡ್ಯ ಜಿಲ್ಲೆಯಲ್ಲಿ ಪ್ರಯೋಗಾತ್ಮಕವಾಗಿ ಜಾರಿಗೊಳಿಸಿ ಯಶಸ್ವಿ ಸಾಧಕ ಪರಿಶೀಲನೆ ನಡೆಸಲಾಗಿದೆ. ಇಂದಿನಿಂದ ರಾಜ್ಯಾದ್ಯಂತ ಶೇ.98 ರಷ್ಟು ಖಾತೆ ಬದಲಾವಣೆಗಳು ಸ್ವಯಂ ಚಾಲಿತಗೊಳ್ಳಲಿವೆ. ಇನ್ನು ಮುಂದೆ ಖಾತೆ ಬದಲಾವಣೆಗೆ ಜನರು ಕಚೇರಿಗಳಿಗೆ ಅಲೆದಾಡಬೇಕಾದ ಅಗತ್ಯವಿಲ್ಲ. ಮನೆಯಿಂದಲೇ ಮೊಬೈಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ. ಅಧಿಕಾರಿಗಳ ಸ್ವೇಚ್ಛಾಚಾರ, ಅವ್ಯವಸ್ಥೆ ಮತ್ತು ಮಧ್ಯವರ್ತಿಗಳ ಕಿರುಕುಳದಿಂದ ಸಾರ್ವಜನಿಕರು ಅನುಭವಿಸುತ್ತಿದ್ದ ತೊಂದರೆಗಳಿಗೆ ಈ ಸ್ವಯಂ ಚಾಲಿತ ವ್ಯವಸ್ಥೆ ಶಾಶ್ವತ ಪರಿಹಾರ ನೀಡಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…

ಯಾವುದೇ ಸಹಕಾರಿ ಸಂಘದಲ್ಲೂ ಕೃಷಿಕರಿಗೆ ಈ ಸಾಲಸಿಗುತ್ತಿಲ್ಲ; ಅಧಿವೇಶನದಲ್ಲಿ ಸರಕಾರದ ಗಮನಸೆಳೆದ ಶಾಸಕ ರೈ

ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ…