ರಾಜ್ಯ ವಾರ್ತೆ

ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಬೆಂಗಳೂರು ಪೊಲೀಸರ ಹೊಸ ಮಾರ್ಗಸೂಚಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಪಾಸ್‌ಪೋರ್ಟ್ ಪೊಲೀಸ್ ಪರಿಶೀಲನೆ ವೇಳೆ ಸಾರ್ವಜನಿಕರಿಗೆ ಕಿರುಕುಳ ಹಾಗೂ ಲಂಚ ಬೇಡಿಕೆ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯ ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಪಾಸ್‌ಪೋರ್ಟ್ ಪರಿಶೀಲನೆಗೆ ತೆರಳುವ ಪೊಲೀಸ್ ಸಿಬ್ಬಂದಿಗೆ ಬಾಡಿ ವಾರ್ನ್ ಕ್ಯಾಮೆರಾ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

maithri

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರ ನಿರ್ದೇಶನದ ಮೇರೆಗೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಕುರಿತು ಸುತ್ತೋಲೆ ಜಾರಿಗೊಳಿಸಿದ್ದಾರೆ.
ಹೊಸ ಮಾರ್ಗಸೂಚಿಗಳ ಪ್ರಕಾರ, ಪರಿಶೀಲನೆಗಾಗಿ ಅರ್ಜಿದಾರರನ್ನು ಠಾಣೆಗೆ ಕರೆಸುವಂತಿಲ್ಲ. ಬದಲಾಗಿ, ಪೊಲೀಸರು ಅರ್ಜಿದಾರರು ನೀಡಿದ ವಿಳಾಸಕ್ಕೆ ಭೇಟಿ ನೀಡಿ ನೆರೆಹೊರೆಯರಿಂದ ಮಾಹಿತಿ ಸಂಗ್ರಹಿಸಬೇಕು. ಪರಿಶೀಲನೆಗೆ ಕನಿಷ್ಠ 24 ಗಂಟೆಗಳ ಮುಂಚಿತವಾಗಿ ಎಸ್‌ಎಂಎಸ್ ಅಥವಾ ಕರೆ ಮೂಲಕ ಮಾಹಿತಿ ನೀಡುವುದು ಕಡ್ಡಾಯವಾಗಿದೆ.

ಪರಿಶೀಲನಾ ಪ್ರಕ್ರಿಯೆ ಆರಂಭದಿಂದ ಅಂತ್ಯವರೆಗೂ ಬಾಡಿ ಕ್ಯಾಮೆರಾವನ್ನು ಆನ್‌ ಮಾಡಿರಬೇಕು. ಸೂಕ್ತ ಪುರಾವೆಗಳಿಲ್ಲದೆ ಪ್ರತಿಕೂಲ ವರದಿ ಸಲ್ಲಿಸುವುದನ್ನು ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘನೆ ಮಾಡಿದ ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಈ ಕ್ರಮದಿಂದ ಪಾಸ್‌ಪೋರ್ಟ್ ಪರಿಶೀಲನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚುವುದರ ಜೊತೆಗೆ ವಿಳಂಬ ಹಾಗೂ ಅವ್ಯವಹಾರ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಮೋಹನ್ ಭಾಗವತ್’ಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ!

ತಾನು ಗೃಹ ಸಚಿವನಾಗಿ ಇರುವವರೆಗೂ ಕರ್ನಾಟಕದಲ್ಲಿ ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ…