ರಾಜ್ಯ ವಾರ್ತೆ

ಡಾ. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಸರ್ಕಾರದ ವತಿಯಿಂದ ಏಪ್ರಿಲ್ 5ರಂದು ಡಾ. ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ ಹಾಗೂ ಏಪ್ರಿಲ್ 14ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸಲಾಗುತ್ತಿದೆ.

chennai-shopping
maithri

ಈ ಹಿನ್ನೆಲೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿರುವ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2026–27ನೇ ಸಾಲಿನ ಡಾ. ಬಾಬು ಜಗಜೀವನರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ಪ್ರದಾನಿಸಲು ಉದ್ದೇಶಿಸಲಾಗಿದೆ.

ಆಸಕ್ತರು ಮಾರ್ಚ್ 6ರೊಳಗೆ ಅಗತ್ಯ ಮಾಹಿತಿಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ತಾಲೂಕು – 0824-2441269, ಬಂಟ್ವಾಳ – 08255-230968, ಪುತ್ತೂರು – 08251-298803, ಬೆಳ್ತಂಗಡಿ – 08256-233528, ಸುಳ್ಯ – 08257-233527 ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…

ಯಾವುದೇ ಸಹಕಾರಿ ಸಂಘದಲ್ಲೂ ಕೃಷಿಕರಿಗೆ ಈ ಸಾಲಸಿಗುತ್ತಿಲ್ಲ; ಅಧಿವೇಶನದಲ್ಲಿ ಸರಕಾರದ ಗಮನಸೆಳೆದ ಶಾಸಕ ರೈ

ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ…