ರಾಜ್ಯ ವಾರ್ತೆ

ಕರ್ನಾಟಕ ಬಜೆಟ್‌ -2026; ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇಂದು ಬಜೆಟ್ ನೇರ ಪ್ರಸಾರ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕರ್ನಾಟಕ ಸರ್ಕಾರದ 2026–27ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6) ವಿಧಾನಸೌಧದಲ್ಲಿ ಮಂಡಿಸುತ್ತಿದ್ದಾರೆ

maithri

17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಬಾರಿ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನರಿಗೆ ತಲುಪಿಸುವ ಉದ್ದೇಶದಿಂದ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದಾದ್ಯಂತ ಇರುವ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಡಿಸ್ಪ್ಲೇ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಿಸುವ ಅವಕಾಶ ಕಲ್ಪಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ಇರುವ ಈ ಪರದೆಗಳ ಮೂಲಕ ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ಜನರು ವೀಕ್ಷಿಸಬಹುದು.

ಈ ಕಾರ್ಯಕ್ರಮವನ್ನು ವೃತ್ತಿ ಸೊಲ್ಯೂಸನ್‌ ಲಿಮಿಟೆಡ್‌ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದೆ. ಇದರ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಪ್ರಯಾಣಿಕರು ಹಾಗೂ ಸಾರ್ವಜನಿಕರು ಸರ್ಕಾರದ ಬಜೆಟ್ ಬಗ್ಗೆ ನೇರವಾಗಿ ಮಾಹಿತಿ ಪಡೆಯುವ ಅವಕಾಶ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

 

 

 

 

 

 

 

 

 

 

 

 

=

 

 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts