ಬೆಂಗಳೂರು:2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಪ್ರಮಾಣದ ಅನುದಾನವನ್ನು ಘೋಷಿಸಿದ್ದಾರೆ. ಮಹಿಳೆಯರ ಆರ್ಥಿಕ ಬಲವರ್ಧನೆಗೆ ಸಹಾಯಕವಾಗಿರುವ ಗೃಹ ಲಕ್ಷ್ಮೀ ಯೋಜನೆಗೆ ಈ ಬಾರಿ ₹28,608 ಕೋಟಿ ಅನುದಾನ ಮೀಸಲಿರಿಸಲಾಗಿದೆ.
ಈ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000 ಹಣವನ್ನು ನೀಡಲಾಗುತ್ತದೆ. ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯುತ್ತಿರುವುದರಿಂದ ಬಜೆಟ್‌ನಲ್ಲಿ ಹೆಚ್ಚಿನ ಮೊತ್ತವನ್ನು ಮೀಸಲಿಡಲಾಗಿದೆ.
ಇದರ ಜೊತೆಗೆ, ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆಗೆ ₹10,578 ಕೋಟಿ, ಬಡ ಕುಟುಂಬಗಳಿಗೆ ಉಚಿತ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆಗೆ ₹6,200 ಕೋಟಿ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ಶಕ್ತಿ ಯೋಜನೆಗೆ ₹5,300 ಕೋಟಿ ಅನುದಾನವನ್ನು ಸರ್ಕಾರ ಘೋಷಿಸಿದೆ.
ಆದರೆ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೋಮಾ ಹೋಲ್ಡರ್‌ಗಳಿಗೆ ಆರ್ಥಿಕ ಸಹಾಯ ನೀಡುವ ಯುವ ನಿಧಿ ಯೋಜನೆಗೆ ಈ ಬಾರಿ ಪ್ರತ್ಯೇಕ ಅನುದಾನ ಘೋಷಣೆ ಮಾಡಿಲ್ಲ .ಒಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಮತ್ತು ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಉದ್ದೇಶದಿಂದ ಬಜೆಟ್‌ನಲ್ಲಿ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದೆ.






















