ರಾಜ್ಯ ವಾರ್ತೆ

ಎಲ್.ಪಿ.ಜಿ. ಗ್ಯಾಸ್ ದರ ಏರಿಕೆ: ಕಾಂಗ್ರೆಸ್ ಪ್ರತಿಭಟನೆ!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಎಲ್.ಪಿ.ಜಿ. ಗ್ಯಾಸ್ ಸಿಲಿಂಡರ್ ದರವನ್ನು 60 ರೂ ಏರಿಕೆ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಸದಸ್ಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಧರಿಸುವ ಮೂಲಕ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

Shani-pooja

ಈಗಾಗಲೇ ದುಬಾರಿ ಬೆಲೆಯಿಂದ ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಈ ನಿರ್ಧಾರ ದೊಡ್ಡ ಹೊಡೆತವಾಗಿದೆ. ಸಬ್ಸಿಡಿ ವ್ಯವಸ್ಥೆಯನ್ನು ಕ್ರಮೇಣ ಕಡಿಮೆ ಮಾಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಸರ್ಕಾರ ಆರ್ಥಿಕ ಹೊರೆ ಹಾಕಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇತ್ತೀಚೆಗೆ ಅಮೆರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ನೀಡಿರುವ ಹೇಳಿಕೆಗಳು ಹಾಗೂ ಜಾಗತಿಕ ರಾಜಕೀಯ ಬೆಳವಣಿಗೆಗಳ ನಡುವೆ ಭಾರತದ ಹಿತಾಸಕ್ತಿಯನ್ನು ದೃಢವಾಗಿ ರಕ್ಷಿಸುವ ಬದಲು ಕೇಂದ್ರ ಸರ್ಕಾರ ಮೌನ ವಹಿಸಿರುವುದು ದೇಶದ ಗೌರವಕ್ಕೆ ಧಕ್ಕೆ ತರುವಂತಾಗಿದೆ ಎಂದು ಟೀಕಿಸಿದರು.

ವಿಶ್ವದ ಮುಂದೆ ಭಾರತದ ಸ್ವಾಭಿಮಾನವನ್ನು ರಕ್ಷಿಸುವ ಬಲವಾದ ರಾಜತಾಂತ್ರಿಕ ನಿಲುವು ತಾಳಬೇಕಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದುರ್ಬಲ ಧೋರಣೆ ತಾಳಿದೆ ಎಂದು ವಾಗ್ದಾಳಿ ನಡೆಸಿದರು.

ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕನ್ನು ಕಾಪಾಡುವ ದೃಷ್ಟಿಯಿಂದ ಎಲ್‌ಪಿಜಿ ದರ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ದೇಶದ ಹಿತಾಸಕ್ತಿಯನ್ನು ರಕ್ಷಿಸುವ ಸ್ಪಷ್ಟ ಮತ್ತು ದೃಢ ನೀತಿಗಳನ್ನು ಜಾರಿಗೆ ತರಬೇಕು. ಇಲ್ಲವಾದರೆ ಜನರ ಆಕ್ರೋಶವನ್ನು ಎದುರಿಸಲು ಕೇಂದ್ರ ಸರ್ಕಾರ ಸಿದ್ಧರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…