ರಾಜ್ಯ ವಾರ್ತೆ

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣ: ಅಧಿಕೃತ ಘೋಷಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಪತ್ತೆಯಾಗಿರುವುದಾಗಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ.

maithri

ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ ಬೇಕರಿ ಹಾಗೂ ಚಿಪ್ಸ್ ತಯಾರಿಕಾ ಕೇಂದ್ರಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು ಸಂಗ್ರಹಿಸಿ ರಾಸಾಯನಿಕ ವಿಶ್ಲೇಷಣಾ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು. ಇದೀಗ ಲ್ಯಾಬ್ ವರದಿ ಬಂದಿದ್ದು, ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ. ಆಕರ್ಷಣೆಗಾಗಿ ಈ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದಾಗಿ ದೃಢಪಟ್ಟಿದೆ.

ಬಹುತೇಕ ಬೇಕರಿ ತಿನಿಸುಗಳು ಮತ್ತು ಚಿಪ್ಸ್‌ಗಳಲ್ಲಿ ನಿಷೇಧಿತ ಹಾಗೂ ಮಿತಿಮೀರಿದ ರಾಸಾಯನಿಕ ಬಣ್ಣಗಳನ್ನು ಮಿಶ್ರಣ ಮಾಡಲಾಗುತ್ತಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲಾ ವರ್ಗದ ಜನರಲ್ಲಿ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳು ಕಾಣಿಸಿಕೊಳ್ಳಲು ಇಂತಹ ಕಲಬೆರಕೆ ಹಾಗೂ ವಿಷಕಾರಿ ಆಹಾರ ಪದ್ಧತಿಯೇ ಮುಖ್ಯ ಕಾರಣ ಎಂದು ಇಲಾಖೆ ತಿಳಿಸಿದ್ದು, ಸಾರ್ವಜನಿಕರ ಆರೋಗ್ಯದ ಬಗ್ಗೆ ತೀವ್ರ ಆತಂಕ ಮೂಡಿಸಿದೆ.

ಆಹಾರ ಇಲಾಖೆಯ ವರದಿ ಪ್ರಕಟವಾದ ಬೆನ್ನಲ್ಲೇ, ನಿಯಮ ಉಲ್ಲಂಘಿಸಿ ವಿಷಕಾರಿ ರಾಸಾಯನಿಕಗಳನ್ನು ಬಳಸುತ್ತಿರುವ ಇಂತಹ ಬೇಜವಾಬ್ದಾರಿ ತಯಾರಕರ ಮತ್ತು ಬೇಕರಿ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಂತಹ ತಯಾರಕರ ಪರವಾನಗಿ ರದ್ದುಪಡಿಸಿ, ಅಂಗಡಿಗಳನ್ನು ತಕ್ಷಣವೇ ಮುಚ್ಚಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇವಳ ಪಕ್ಕದಲ್ಲಿ ಸರಕಾರಿ ಶಾಲೆ: ಬಿಸಿಯೂಟದ ಮೊಟ್ಟೆಗೆ ಕುತ್ತು! ವಿದ್ಯಾರ್ಥಿಗಳಿಂದ ಶಾಲೆ ತೊರೆಯುವ ಸಾಮೂಹಿಕ ಬೆದರಿಕೆ!!

ಮಧ್ಯಾಹ್ನದ ಬಿಸಿ ಊಟದ ಯೋಜನೆ ಹಿನ್ನೆಲೆಯಲ್ಲಿ ದೇವಾಲಯದ ಪಕ್ಕದಲ್ಲಿರುವ ಸರ್ಕಾರಿ ಶಾಲೆಯೊಂದರ…