ರಾಜ್ಯ ವಾರ್ತೆ

ಪ್ರಜಾಸೇವೆ ಇಲಾಖೆ ಸ್ಥಾಪನೆ | ಸಾರ್ವಜನಿಕರ ಕುಂದು ಕೊರತೆ ನಿರ್ವಹಣೆಗೆ ಸಿಎಂ ಡಿಕೆಶಿ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಸಾರ್ವಜನಿಕರ ಕುಂದು ಕೊರತೆ ಆಲಿಸಲು ಒಂದು ಹೊಸ ಇಲಾಖೆಯೇ ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಈ ಘೋಷಣೆ ಮಾಡಿದ್ದಾರೆ.

maithri

ನೂತನ ಇಲಾಖೆಯ ಹೆಸರು ಪ್ರಜಾಸೇವೆ ಇಲಾಖೆ. ನಾಡಿನ ಜನರ ಕುಂದುಕೊರತೆ ಆಲಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಇಂದು (ಜೂನ್ 20) ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಎರಡನೇ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಇದಕ್ಕೆ ಪ್ರಜಾಸೇವೆ ಇಲಾಖೆ (Prajaseve Department) ಎಂದು ನಾಮಕರಣ ಮಾಡುವುದಾಗಿ ಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸ್ಪಂದಿಸಿ ನ್ಯಾಯ ದೊರಕಿಸಲು ಈ ಪ್ರಜಾಸೇವೆ ಇಲಾಖೆಯನ್ನು ರಚಿಸಲು ಸಚಿವ ಸಂಪುಟ ನಿರ್ಧರಿಸಿದ್ದು, ಈ ಹೊಸ ಇಲಾಖೆಯಲ್ಲಿ ಪ್ರತ್ಯೇಕವಾಗಿ ಸಚಿವರು ಹಾಗೂ IAS ಅಧಿಕಾರಿಗಳು ಇರಲಿದ್ದಾರೆ.

ಜನರ ಸಮಸ್ಯೆಗಳಿಗೆ ಈ ಇಲಾಖೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತದೆ. ಸಚಿವರು ಎಲ್ಲಾ 224 ಕ್ಷೇತ್ರಗಳಿಗೂ ಹೋಗಿ ಶಾಸಕರ ಜತೆ ಸಭೆ ನಡೆಸಿ ಜನರ ಅಹವಾಲುಗಳನ್ನು ಆಲಿಸಿ ನ್ಯಾಯ ದೊರಕಿಸುವ ಕೆಲಸ ಮಾಡಲಿದ್ದಾರೆ. ವಾರಕ್ಕೊಮ್ಮೆ ಕಡ್ಡಾಯವಾಗಿ ಶಾಸಕರ ಜತೆಗೂಡಿ ಜನಸ್ಪಂದನ ಸಭೆ ನಡೆಸಿ ಅಲ್ಲಿನ ಅಭಿಪ್ರಾಯಗಳನ್ನು ನಮಗೆ ತಲಪಿಸುತ್ತಾರೆ. ಅದಕ್ಕೆ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ವಿವರಿಸಿದರು.

ಸಾರ್ವಜನಿಕ ಕುಂದುಕೊರತೆಗೆ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗುವುದು. ದಿನಕ್ಕೆ ಎರಡು ಮೂರು ತಂಡ ಪ್ರತಿಭಟನೆ ಮಾಡುತ್ತಿರುತ್ತದೆ. ಅವರ ಅಹವಾಲು ಕೇಳಬೇಕಾಗಿದೆ. ಏನಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ?. ಅವರ ಬೇಡಿಕೆಗಳೇನು?. ಸಮಸ್ಯೆಗಳೇನು? ಎಂಬ ಬಗ್ಗೆ ತಿಳಿದುಕೊಳ್ಳಬೇಕಾಗಿದೆ. ಬಳಿಕ ಅವರ ಸಮಸ್ಯೆಗೆ ಸ್ಪಂದಿಸಲು, ಪ್ರತ್ಯೇಕ ಸಚಿವಾಲಯ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts