tamanvi
ರಾಜ್ಯ ವಾರ್ತೆ

ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಮೋಹನ್ ಭಾಗವತ್’ಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ತಾನು ಗೃಹ ಸಚಿವನಾಗಿ ಇರುವವರೆಗೂ ಕರ್ನಾಟಕದಲ್ಲಿ ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಸಂಘಟನೆ ಕಾಗದಗಳು ಎಲ್ಲೋ ಇರಬಹುದು. ಹುಡುಕುತ್ತಿದ್ದಾರೆ ಹುಡುಕಿಕೊಂಡು ಬರಲಿ. ಇಷ್ಟು ಕೇಳಿದ್ದಕ್ಕೆ ನನ್ನ ವೈಯಕ್ತಿಕ ಮಾಹಿತಿ ಕೆದಕುತ್ತಿದ್ದಾರೆ. ಪ್ರಿಯಾಂಕ್ ಯಾರನ್ನು ಮದುವೆಯಾಗಿದ್ದು, ಮಕ್ಕಳು ಯಾರು? ಪ್ರಿಯಾಂಕ್ ಕಪ್ಪಗಿದ್ದಾನಾ, ಬೆಳ್ಳಗಿದ್ದಾನಾ ಎಲ್ಲಾ ಕೆದಕುತ್ತಿದ್ದಾರೆ. ಇದಕ್ಕೆಲ್ಲ ನಾನು ಹೆದರುವ ವ್ಯಕ್ತಿಯಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆರ್​​ಎಸ್​​ಎಸ್​​ನವರು ಧ್ವಜದ ಮೇಲೆ ದೇಣಿಗೆ ತೆಗೆದುಕೊಳ್ತಾರೆ. ದೇಣಿಗೆ ಪಡೆದುಕೊಳ್ಳೋಕೆ ಇವರ ಗುರು ಯಾರು? ಹಾಗಿದ್ರೆ ಇವರಗೆ ಲೆಕ್ಕ ಕೇಳಬಾರದಾ ಎಂದು ಗೃಹ ಸಚಿವರು ಪ್ರಶ್ನಿಸಿದ್ದಾರೆ. ನಾಳೆ ನೀವೂ ಒಂದು ಧ್ವಜದ ಮೇಲೆ ಸಂಘಟನೆ ಮಾಡಿ, ಚಂದಾ ಕಲೆಕ್ಟ್‌ ಮಾಡಿ. ಅವಾಗ ಐಟಿ, ಇಡಿಯವರು ಸುಮ್ನೆ ಕೂರುತ್ತಾರಾ? ಎಲ್ಲರೂ ಹೀಗೇ ಮಾಡಲಿ ಅವಾಗ ನೋಡೋಣ ಎಂದವರು ಕಿಡಿ ಕಾರಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…