tamanvi
ರಾಜ್ಯ ವಾರ್ತೆ

ಶಿರಾಡಿ ಘಾಟ್‌ನಲ್ಲಿ ಮಣ್ಣು ತೆರವು ಪೂರ್ಣ: ಮಂಗಳೂರು – ಬೆಂಗಳೂರು ರೈಲು ಸಂಚಾರ ಮರು ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಭಾರಿ ಮಳೆಯಿಂದ ಮಂಗಳೂರು–ಬೆಂಗಳೂರು ರೈಲು ಮಾರ್ಗದ ಎಡಕುಮೇರಿ–ಸಿರಿಬಾಗಿಲು ನಡುವೆ ರೈಲು ಹಳಿಯ ಸಮೀಪ ಸಂಭವಿಸಿದ್ದ ಮಣ್ಣು ಕುಸಿತವನ್ನು ಯಶಸ್ವಿಯಾಗಿ ತೆರವುಗೊಳಿಸಲಾಗಿದ್ದು, ಸೋಮವಾರ ರಾತ್ರಿ ಬಳಿಕ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಮರು ಆರಂಭಿಸಲಾಗಿದೆ.

ಮಣ್ಣು ತೆರವು ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಘಟನಾ ಸ್ಥಳದಲ್ಲಿ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಗಂಟೆಗೆ 10 ಕಿ.ಮೀ. ತಾತ್ಕಾಲಿಕ ವೇಗದ ಮಿತಿ ಜಾರಿಯಲ್ಲಿರಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲುಗಳ ವೇಳಾಪಟ್ಟಿಯನ್ನು ಹಂತಹಂತವಾಗಿ ಮರು ಹೊಂದಿಸಲಾಗುತ್ತಿದ್ದು, ಆರಂಭಿಕ ಹಂತದಲ್ಲಿ ಕೆಲ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಪರಿಸ್ಥಿತಿ ಸಂಪೂರ್ಣ ಸಹಜಗೊಂಡ ಬಳಿಕ ರೈಲು ಸೇವೆ ಎಂದಿನಂತೆ ಸುಗಮವಾಗಿ ಮುಂದುವರಿಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…