tamanvi
ರಾಜ್ಯ ವಾರ್ತೆ

ಹೋಟೆಲ್‌ ಆಹಾರದ ಗುಣಮಟ್ಟಕ್ಕೆ QR ಕೋಡ್ ಕಾವಲು: ಕಳಪೆ ಆಹಾರ ಕಂಡರೆ ಸ್ಕ್ಯಾನ್ ಮಾಡಿ ದೂರು ನೀಡಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ದಿಢೀರ್ ದಾಳಿ ನಡೆಸಿದ ಬೆನ್ನಲ್ಲೇ, ಹೋಟೆಲ್‌ಗಳು ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ QR ಕೋಡ್ ಅಳವಡಿಸುವ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.

QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಹಾರದ ಗುಣಮಟ್ಟ, ಸೇವೆ ಅಥವಾ ಇತರ ಸಮಸ್ಯೆಗಳ ಕುರಿತು ಸಾರ್ವಜನಿಕರು ನೇರವಾಗಿ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ತಪಾಸಣಾ ಕಾರ್ಯವನ್ನು ಮುಂದುವರಿಸಿದೆ. ನಿನ್ನೆಯವರೆಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು 3-ಸ್ಟಾರ್ ಹಾಗೂ 5-ಸ್ಟಾರ್ ಹೋಟೆಲ್‌ಗಳು, 8 ಗೋಡೌನ್‌ಗಳು ಮತ್ತು 4 ಎಂಟರ್‌ಪ್ರೈಸ್‌ ರೆಸ್ಟೋರೆಂಟ್‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ತಪಾಸಣೆ ವೇಳೆ ಆಹಾರ ಸುರಕ್ಷತಾ ನಿಯಮಗಳ ಪಾಲನೆ, ಆಹಾರ ಸಂಗ್ರಹಣೆ ಹಾಗೂ ಗುಣಮಟ್ಟವನ್ನು ಪರಿಶೀಲಿಸಲಾಗಿದ್ದು, ನೂರಾರು ಕೆಜಿ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವಧಿ ಮೀರಿದ, ತಪ್ಪು ಲೇಬಲ್ ಹೊಂದಿರುವ ಹಾಗೂ ಅಸಮರ್ಪಕವಾಗಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರ ಜೊತೆಗೆ ಹೋಟೆಲ್‌ಗಳು, ಮೆಡಿಕಲ್ ಸ್ಟೋರ್‌ಗಳು ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ QR ಕೋಡ್ ಅಳವಡಿಸುವ ಕುರಿತು ಸರ್ಕಾರ ಮುಂದಾಗಿದೆ. ಗ್ರಾಹಕರು QR ಕೋಡ್ ಸ್ಕ್ಯಾನ್ ಮಾಡಿ ತಮ್ಮ ಸಮಸ್ಯೆ ಅಥವಾ ದೂರನ್ನು ಸಲ್ಲಿಸಬಹುದಾಗಿದೆ.

ಆದರೆ, ಹೋಟೆಲ್‌ಗಳಲ್ಲಿ QR ಕೋಡ್ ಅಳವಡಿಸುವ ಪ್ರಸ್ತಾವನೆಗೆ ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್‌ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಸಂಘದ ಸದಸ್ಯರೊಂದಿಗೆ ಚರ್ಚಿಸಿ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ಸರ್ಕಾರದ ಆದೇಶವನ್ನು ಪುನರ್‌ ಪರಿಶೀಲಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ಸಂಘದ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ.

ಹೋಟೆಲ್‌ಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸಂಸ್ಥೆಗಳ ಹೆಸರು ಬಹಿರಂಗಪಡಿಸುವ ಬಗ್ಗೆಯೂ ಅಸೋಸಿಯೇಷನ್‌ ಅಸಮಾಧಾನ ವ್ಯಕ್ತಪಡಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…