tamanvi
ರಾಜ್ಯ ವಾರ್ತೆ

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ: ಮೃತರ ಖಾತೆಗೆ ₹117.31 ಕೋಟಿ ಜಮೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ಸೇವಾ ಸಿಂಧು ಕೇಂದ್ರಗಳು ಹಾಗೂ ಮನೆ-ಮನೆ ಸಮೀಕ್ಷೆ ಮೂಲಕ ಫಲಾನುಭವಿಗಳ ಮರುಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮರುಪರಿಶೀಲನೆ ಸಂದರ್ಭದಲ್ಲಿ ಫಲಾನುಭವಿಗಳ ಬಯೋಮೆಟ್ರಿಕ್ ಹಾಗೂ ಫೇಸ್ ಆಥೆಂಟಿಕೇಶನ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಉದ್ದೇಶಕ್ಕಾಗಿ ಇ-ಡಿಸಿಎಸ್ ಮೂಲಕ ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದ್ದು, ಅಂತಿಮ ಪರಿಶೀಲನಾ ಹಂತದಲ್ಲಿದೆ.

ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 1,24,48,938 ಫಲಾನುಭವಿಗಳಿದ್ದು, ಇದುವರೆಗೆ 32 ಕಂತುಗಳಲ್ಲಿ ತಲಾ ₹2,000ರಂತೆ ಒಟ್ಟು ₹76,951 ಕೋಟಿ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ.

ಯೋಜನೆ ಆರಂಭವಾದ ಬಳಿಕ 2026ರ ಜೂನ್ ಅಂತ್ಯದವರೆಗೆ 3,13,297 ಫಲಾನುಭವಿಗಳು ಮೃತಪಟ್ಟಿದ್ದಾರೆ. ಈ ಪೈಕಿ 1,10,562 ಮೃತ ಫಲಾನುಭವಿಗಳ ಖಾತೆಗಳಿಗೆ ಮರಣದ ನಂತರವೂ ₹117.31 ಕೋಟಿ ಹಣ ಜಮೆಯಾಗಿರುವುದು ಪತ್ತೆಯಾಗಿದೆ. ಈ ಮೊತ್ತದಲ್ಲಿ ಇದುವರೆಗೆ ₹40.07 ಕೋಟಿ ಮಾತ್ರ ಸರ್ಕಾರದ ಲೆಕ್ಕಕ್ಕೆ ವಾಪಸ್ ಜಮೆಯಾಗಿದೆ.

ಮೃತ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿರುವ ಹಿನ್ನೆಲೆಯಲ್ಲಿ ಯೋಜನೆಯ ದುರುಪಯೋಗ ತಡೆಯಲು ಮರುಪರಿಶೀಲನೆ ಕೈಗೊಳ್ಳಲಾಗಿದೆ. ಮೃತಪಟ್ಟ ಫಲಾನುಭವಿಗಳ ಬದಲಿಗೆ ಕುಟುಂಬದ ಅರ್ಹ ಸದಸ್ಯರನ್ನು ಫಲಾನುಭವಿಗಳಾಗಿ ಸೇರ್ಪಡೆಗೊಳಿಸುವ ಪ್ರಕ್ರಿಯೆಯೂ ನಡೆಯುತ್ತಿದೆ.

ಜಿಲ್ಲಾವಾರು ಅಂಕಿ-ಅಂಶಗಳ ಪ್ರಕಾರ ಬೆಳಗಾವಿಯಲ್ಲಿ ಅತಿ ಹೆಚ್ಚು 24,705 ಫಲಾನುಭವಿಗಳು ಮೃತಪಟ್ಟಿದ್ದರೆ, ಕೊಡಗಿನಲ್ಲಿ ಅತಿ ಕಡಿಮೆ 2,991 ಫಲಾನುಭವಿಗಳು ಮೃತಪಟ್ಟಿದ್ದಾರೆ. ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿರುವ ಹಣವನ್ನು ವಾಪಸ್ ಪಡೆಯುವ ಪ್ರಕ್ರಿಯೆ ಜಿಲ್ಲಾವಾರು ನಡೆಯುತ್ತಿದೆ ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…