ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ಹೊರಬಿದ್ದಿದ್ದು, ಅರ್ಹ ಫಲಾನುಭವಿಗಳು ಸೆ.30ರೊಳಗೆ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಪಡಿತರ ಸೌಲಭ್ಯಗಳು ನಿರಂತರವಾಗಿ ದೊರೆಯಲು ಇ-ಕೆವೈಸಿ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ.
5 ವರ್ಷ ಮೇಲ್ಪಟ್ಟ ಪಡಿತರ ಚೀಟಿದಾರರು ತಮ್ಮ ಬೆರಳಚ್ಚು ಅಥವಾ ಅಗತ್ಯವಿರುವ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದು. BPL ಹಾಗೂ ಅಂತ್ಯೋದಯ ಅನ್ನ ಯೋಜನೆ (AAY) ಪಡಿತರ ಚೀಟಿದಾರರಿಗೆ ಇ-ಕೆವೈಸಿ ಅನ್ವಯವಾಗಲಿದ್ದು, APL ಪಡಿತರ ಚೀಟಿದಾರರಿಗೆ ಇ-ಕೆವೈಸಿ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.
ಇ-ಕೆವೈಸಿ ಪ್ರಕ್ರಿಯೆಯನ್ನು ಸಂಬಂಧಪಟ್ಟ ಪಡಿತರ ವಿತರಣಾ ಕೇಂದ್ರ ಅಥವಾ ಸೊಸೈಟಿಯಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಫಲಾನುಭವಿಗಳು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ತೆರಳಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಇನ್ನು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ, ಹೆಸರು ತಿದ್ದುಪಡಿ ಸೇರಿದಂತೆ ಇತರೆ ಬದಲಾವಣೆಗಳಿದ್ದರೆ, ಸಂಬಂಧಪಟ್ಟ ಇಲಾಖೆಯ ನಿಯಮಾನುಸಾರ ಅರ್ಜಿ ಸಲ್ಲಿಸಿ ಕ್ರಮ ಕೈಗೊಳ್ಳಬಹುದಾಗಿದೆ.
ಸರ್ಕಾರದ ಉಚಿತ ಸೌಲಭ್ಯಗಳು ಹಾಗೂ ಪಡಿತರ ವಿತರಣೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ, ಅರ್ಹ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸುವುದು ಸೂಕ್ತವಾಗಿದೆ.
























