tamanvi
ರಾಜ್ಯ ವಾರ್ತೆಸ್ಥಳೀಯ

ರಾಷ್ಟ್ರೀಯ ಸರಸ್ ಮೇಳದಲ್ಲಿ ಮುಲ್ಕಿ ತಾಲೂಕಿನ ಮಹಿಳಾ ಸ್ವಸಹಾಯ ಸಂಘಗಳ ಭಾಗಿ

ಈ ಸುದ್ದಿಯನ್ನು ಶೇರ್ ಮಾಡಿ

ಮುಲ್ಕಿ: ಬೆಂಗಳೂರಿನಲ್ಲಿ ಸೆಪ್ಟೆಂಬರ್ 19ರಿಂದ 27ರವರೆಗೆ ನಡೆಯುತ್ತಿರುವ ರಾಷ್ಟ್ರೀಯ ಸರಸ್ ಮೇಳ 2026ರಲ್ಲಿ ಮುಲ್ಕಿ ತಾಲೂಕಿನ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸುತ್ತಿದ್ದಾರೆ.

ಅತಿಕಾರಿಬೆಟ್ಟು ಗ್ರಾಮ ಪಂಚಾಯತ್‌ನ ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಗೀತಾ ಎಲ್. ಹಾಗೂ ಕುಂಜಾರುಗಿರಿ ಸ್ತ್ರೀ ಶಕ್ತಿ ಗುಂಪಿನ ಶಾರದಾ ಅವರು ರಾಷ್ಟ್ರೀಯ ಸರಸ್ ಮೇಳದ ಲೈವ್ ಫುಡ್ ಸ್ಟಾಲ್ನಲ್ಲಿ ಭಾಗವಹಿಸಿ ವಿವಿಧ ಆಹಾರ ಉತ್ಪನ್ನಗಳನ್ನು ಪರಿಚಯಿಸುತ್ತಿದ್ದಾರೆ.

ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಸ್ಥಳೀಯ ಆಹಾರ ಪದ್ಧತಿ ಹಾಗೂ ಉತ್ಪನ್ನಗಳಿಗೆ ಮಾರುಕಟ್ಟೆ ಮತ್ತು ಪ್ರಚಾರದ ಅವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಮೇಳದಲ್ಲಿ ವಿವಿಧ ರಾಜ್ಯಗಳ ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಗ್ರಾಮೀಣ ಉತ್ಪಾದಕರು ಭಾಗವಹಿಸುತ್ತಿದ್ದಾರೆ.

ರಾಷ್ಟ್ರೀಯ ಮಟ್ಟದ ಮೇಳದಲ್ಲಿ ಭಾಗವಹಿಸುವ ಮೂಲಕ ಮುಲ್ಕಿ ತಾಲೂಕಿನ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳು ಹಾಗೂ ಸ್ಥಳೀಯ ಆಹಾರ ವೈವಿಧ್ಯತೆ ಬೆಂಗಳೂರಿನ ಗ್ರಾಹಕರಿಗೆ ಪರಿಚಯವಾಗುವಂತಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 171