tamanvi
ರಾಜ್ಯ ವಾರ್ತೆ

ಬ್ಯಾಂಕ್ ಮುಷ್ಕರ ಮುಂದೂಡಿಕೆ: ಗ್ರಾಹಕರಿಗೆ ಎಂದಿನಂತೆ ಲಭ್ಯ ಬ್ಯಾಂಕಿಂಗ್ ಸೇವೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ವಾರದಲ್ಲಿ ಐದು ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸುವುದಾಗಿ ಭಾರತೀಯ ಬ್ಯಾಂಕ್‌ಗಳ ಒಕ್ಕೂಟ (IBA) ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್‌ಗಳು ಸೋಮವಾರದಿಂದ ನಡೆಸಲು ಉದ್ದೇಶಿಸಿದ್ದ ಮೂರು ದಿನಗಳ ದೇಶವ್ಯಾಪಿ ಮುಷ್ಕರವನ್ನು ಮುಂದೂಡಿವೆ.

ಸೋಮವಾರದಿಂದ ಮೂರು ದಿನಗಳ ಮುಷ್ಕರಕ್ಕೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿತ್ತು. ಆದರೆ ರವಿವಾರ ಸಂಜೆ ನಡೆದ ಸಭೆಯ ಬಳಿಕ ಮುಷ್ಕರವನ್ನು ಮುಂದೂಡಿರುವುದಾಗಿ ಘೋಷಿಸಲಾಗಿದೆ. ಹೀಗಾಗಿ ಸೋಮವಾರ ದೇಶದಾದ್ಯಂತ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಬ್ಯಾಂಕ್ ಸಿಬ್ಬಂದಿಯ ವಿವಿಧ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಲಾಗಿದೆ. ಈ ಸಮಿತಿಯು ಬೇಡಿಕೆಗಳಿಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಪರಿಶೀಲಿಸಿ, ಎಲ್ಲರಿಗೂ ಒಪ್ಪಿತವಾಗುವ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಷ್ಕರ ಮುಂದೂಡಿಕೆಯಿಂದ ಬ್ಯಾಂಕ್ ಗ್ರಾಹಕರಿಗೆ ಸೋಮವಾರ ಎಂದಿನಂತೆ ಬ್ಯಾಂಕಿಂಗ್ ಸೇವೆಗಳು ಲಭ್ಯವಾಗಲಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts