ರಾಜ್ಯ ವಾರ್ತೆ

ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬಳಕೆ ನಿಷೇಧ: ನಿಯಮ ಉಲ್ಲಂಘಿಸಿದರೆ ₹500 ದಂಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ದ್ವಿಚಕ್ರ ವಾಹನ ಸವಾರರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆಯನ್ನು ನಿಷೇಧಿಸಲಾಗಿದೆ. ಸವಾರರು ಕಡ್ಡಾಯವಾಗಿ BIS/ISI ಗುಣಮಟ್ಟದ ಮಾನದಂಡ ಹೊಂದಿರುವ ಹೆಲ್ಮೆಟ್‌ಗಳನ್ನೇ ಧರಿಸಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ.

gl

ಅಪಘಾತಗಳ ಸಂದರ್ಭದಲ್ಲಿ ತಲೆಗೆ ಗಂಭೀರ ಗಾಯಗಳಾಗುವ ಅಪಾಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕೇವಲ ಹೆಸರಿಗಷ್ಟೇ ಬಳಸುವ ಸಣ್ಣ ಗಾತ್ರದ ಅಥವಾ ಕಳಪೆ ಗುಣಮಟ್ಟದ ಹಾಫ್ ಹೆಲ್ಮೆಟ್‌ಗಳ ಬಳಕೆಯನ್ನು ನಿಯಂತ್ರಿಸಲು ಇಲಾಖೆ ಮುಂದಾಗಿದೆ.

ಸವಾರರು ಮಾತ್ರವಲ್ಲದೆ, ಗುಣಮಟ್ಟದ ಮಾನದಂಡಗಳನ್ನು ಪೂರೈಸದ ಹಾಫ್ ಹೆಲ್ಮೆಟ್‌ಗಳನ್ನು ತಯಾರಿಸುವವರು ಹಾಗೂ ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ನಿಯಮ ಉಲ್ಲಂಘಿಸಿದರೆ ದಂಡ

ಹೆಲ್ಮೆಟ್ ಧರಿಸದೆ ಅಥವಾ ಅಮಾನ್ಯವಾದ ಹಾಫ್ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸಿದರೆ ₹500 ದಂಡ ವಿಧಿಸಲಾಗುತ್ತದೆ. ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಅವರಿಗೂ ದಂಡ ಅನ್ವಯವಾಗಲಿದೆ.

ಸತತವಾಗಿ ನಿಯಮ ಉಲ್ಲಂಘಿಸಿದಲ್ಲಿ ₹1,000 ದಂಡದ ಜೊತೆಗೆ ಮೂರು ತಿಂಗಳವರೆಗೆ ಚಾಲನಾ ಪರವಾನಗಿ (DL) ಅಮಾನತು ಮಾಡುವ ಅವಕಾಶವೂ ಇದೆ.

ಹೀಗಾಗಿ ದ್ವಿಚಕ್ರ ವಾಹನ ಸವಾರರು ಸುರಕ್ಷತೆಯ ದೃಷ್ಟಿಯಿಂದ ಗುಣಮಟ್ಟದ BIS/ISI ಪ್ರಮಾಣಿತ ಹೆಲ್ಮೆಟ್ ಬಳಸುವಂತೆ ಇಲಾಖೆ ಸೂಚಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts