ರಾಜ್ಯ ವಾರ್ತೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ | ಐದು ರಾಜ್ಯಗಳಿಗೆ ರಾಜ್ಯಪಾಲರ ನೇಮಕಗೊಳಿಸಿದ ರಾಷ್ಟ್ರಪತಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಹರಿಯಾಣ ಮೂಲದ ಬಿಜೆಪಿ ನಾಯಕಿ, ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರು ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ನಿಯುಕ್ತಿಗೊಂಡಿದ್ದಾರೆ.

gl

ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಅವರು ಈ ಹಿಂದೆ 13ನೇ ಲೋಕಸಭೆಯಲ್ಲಿ (1999-2004) ಹರಿಯಾಣದ ಮಹೇಂದ್ರಗಢ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019ರಿಂದ 2022ರವರೆಗೆ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಸದಸ್ಯರಾಗಿದ್ದರು.

60 ವರ್ಷದ ಸುಧಾ ಯಾದವ್ ಅವರು ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಐಐಟಿ ರೂರ್ಕಿಯಿಂದ ಪಿಎಚ್.ಡಿ ಪಡೆದಿದ್ದಾರೆ. ಅವರ ಪತಿ, ಬಿಎಸ್‌ಎಫ್ ಡೆಪ್ಯುಟಿ ಕಮಾಂಡೆಂಟ್ ಆಗಿದ್ದ ಸುಖ್‌ಬೀರ್ ಸಿಂಗ್ ಯಾದವ್ 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿದ್ದರು.

ಇದರೊಂದಿಗೆ ಇತರ ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿಯೂ, ಸಿಕ್ಕಿಂನ ರಾಜ್ಯಪಾಲ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿಯೂ ನೇಮಕ ಮಾಡಲಾಗಿದೆ. ದುಷ್ಯಂತ್ ಗೌತಮ್ ಅವರು ಸಿಕ್ಕಿಂನ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ಜಾರ್ಖಂಡ್‌ನ ಬಿಜೆಪಿ ಹಿರಿಯ ನಾಯಕ ಬ್ರಜ್ ಮೋಹನ್ ರಾಮ್ ಅವರು ಒಡಿಶಾ ರಾಜ್ಯಪಾಲರಾಗಿಯೂ, ಢಾಲ್ ಸಿಂಗ್ ಬಿಸೆನ್ ಅವರು ಉತ್ತರಾಖಂಡ ರಾಜ್ಯಪಾಲರಾಗಿಯೂ ನೇಮಕಗೊಂಡಿದ್ದಾರೆ.

ಈ ನೇಮಕಾತಿಗಳು ಅವರು ತಮ್ಮ ಸಂಬಂಧಿತ ಕಚೇರಿಗಳ ಅಧಿಕಾರ ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುತ್ತವೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts