ರಾಜ್ಯ ವಾರ್ತೆ

ದೀಪಾವಳಿ ಹಿನ್ನೆಲೆ: ಕರಾವಳಿಯ ರೈಲ್ವೇ ಪ್ರಯಾಣಿಕರಿಗೆ ಸಿಹಿಸುದ್ದಿ | ಯಶವಂತಪುರ –ಮಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ಯಶವಂತಪುರ–ಮಡಗಾಂವ್ ಹಾಗೂ ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸಲಿವೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ರೈಲ್ವೆ ಇಲಾಖೆ, ನವೆಂಬರ್ 6ರಂದು ರೈಲು ಸಂಖ್ಯೆ 06591 ಯಶವಂತಪುರದಿಂದ ರಾತ್ರಿ 11.55ಕ್ಕೆ ಪ್ರಯಾಣ ಆರಂಭಿಸಿ ಮರುದಿನ ಸಂಜೆ 6.10ಕ್ಕೆ ಮಡಗಾಂವ್ ತಲುಪಲಿದೆ ಎಂದು ತಿಳಿಸಿದೆ.

ಹಾಗೆಯೇ, ನವೆಂಬರ್ 8ರಂದು ರೈಲು ಸಂಖ್ಯೆ 06592 ಮಡಗಾಂವ್‌ನಿಂದ ಬೆಳಗ್ಗೆ 11 ಗಂಟೆಗೆ ಹೊರಟು ನವೆಂಬರ್ 9ರಂದು ಬೆಳಗ್ಗೆ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಕರಾವಳಿ ಭಾಗದ ಹಲವು ನಿಲ್ದಾಣಗಳಲ್ಲಿ ನಿಲುಗಡೆ

ಈ ವಿಶೇಷ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಮಂಗಳೂರು ಜಂಕ್ಷನ್, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಹಾಗೂ ಕಣಕೋಣ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಮರು ಪ್ರಯಾಣದ ವೇಳೆ ರೈಲು ಸಂಖ್ಯೆ 06592 ಯಶವಂತಪುರದಲ್ಲಿ ನಿಲುಗಡೆ ಹೊಂದಿರುವುದಿಲ್ಲ. ಬದಲಾಗಿ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಇರಲಿದೆ.

19 ಬೋಗಿಗಳ ವ್ಯವಸ್ಥೆ

ಪ್ರಯಾಣಿಕರ ಅನುಕೂಲಕ್ಕಾಗಿ ಒಟ್ಟು 19 ಬೋಗಿಗಳನ್ನು ರೈಲಿನಲ್ಲಿ ಅಳವಡಿಸಲಾಗಿದ್ದು, ಎಸಿ, ಸ್ಲೀಪರ್, ಸಾಮಾನ್ಯ ಹಾಗೂ ದಿವ್ಯಾಂಗಚೇತನ ಪ್ರಯಾಣಿಕರಿಗೆ ಮೀಸಲಾದ ಬೋಗಿಗಳ ವ್ಯವಸ್ಥೆ ಮಾಡಲಾಗಿದೆ.

ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈ ವಿಶೇಷ ರೈಲು ಸೇವೆ ಒದಗಿಸಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts