ರಾಜ್ಯ ವಾರ್ತೆ

ಬೇಲಿಯೇ ಎದ್ದು ಹೊಲ ಮೇಯ್ದಂತೆ!! ಜ್ಯುವೆಲ್ಲರಿ ಮಾಲಕರ ಮನೆಯಿಂದ 15 ಕೋಟಿ ರೂ. ಅಧಿಕ ಮೌಲ್ಯದ ವಸ್ತು ಕಳ್ಳತನ!

ಮನೆಯ ಸೆಕ್ಯುರಿಟಿ ಗಾರ್ಡ್ ನಿಂದಲೇ ಅರಿಹಂತ್ ಜ್ಯುವೆಲ್ಲರ್ಸ್ ಮಾಲಕರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆಯಿದು.

ಈ ಸುದ್ದಿಯನ್ನು ಶೇರ್ ಮಾಡಿ

ಮನೆಯಿಂದ ಹೊರಹೋಗುವಾಗ ಮನೆಯ ವಸ್ತುಗಳ ಸುರಕ್ಷತೆಗೆ ಸೆಕ್ಯುರಿಟಿ ಗಾರ್ಡ್ ನೇಮಿಸುವುದು ಸಾಮಾನ್ಯ. ಹೀಗೆ ನೇಮಿಸಿದ ಸೆಕ್ಯುರಿಟಿ ಗಾರ್ಡೇ ಕಳವಿಗೆ ಮುಂದಾದರೆ??
ಇಂತಹದ್ದೊಂದು ಘಟನೆ ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮನೆಯ ಸೆಕ್ಯುರಿಟಿ ಗಾರ್ಡ್ ನಿಂದಲೇ ಅರಿಹಂತ್ ಜ್ಯುವೆಲ್ಲರ್ಸ್ ಮಾಲಕರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆಯಿದು.

SRK Ladders

ಅರಿಹಂತ್‌ ಜ್ಯುವೆಲ್ಲರ್ಸ್ ಮಾಲೀಕ ಸುರೇಂದ್ರ ಕುಮಾ‌ರ್ ಜೈನ್ ಅವರ ಚಿನ್ನದ ಮಳಿಗೆಯಲ್ಲಿ ನೇಪಾಳ ಮೂಲದ ನಮ್ರಾಜ್ ಕಳೆದ 6 ತಿಂಗಳಿನಿಂದ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ. ಆತನಿಗೆ ಉಳಿದುಕೊಳ್ಳಲು ತಮ್ಮದೇ ಮನೆಯಲ್ಲಿ ಒಂದು ರೂಮ್ ಸಹ ನೀಡಿದ್ದರು. ಹೀಗಾಗಿ ಸೆಕ್ಯೂರಿಟಿ ಗಾರ್ಡ್ ಕೆಲಸದ ಜೊತೆಗೆ ಸುರೇಂದ್ರ ಕುಮಾರ್ ಜೈನ್ ಅವರ ಮನೆಯ ಗಾರ್ಡನ್‌ನಲ್ಲಿ ಗಿಡಗಳಿಗೆ ನೀರು ಹಾಕುವುದು ಸೇರಿದಂತೆ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದ.

ನವೆಂಬ‌ರ್ 1ರಂದು ಜಾತ್ರೆಯ ನಿಮಿತ್ತ ಸುರೇಂದ್ರ ಕುಮಾರ್ ಜೈನ್ ಅವರ ಕುಟುಂಬ ಗುಜರಾತ್‌ನ ಗಿರ್ನಾರಿಗೆ ತೆರಳಿತ್ತು. ಈ ವೇಳೆ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿದಂತೆ ಸುಮಾರು 15.15 ಕೋಟಿ ಮೌಲ್ಯದ ವಸ್ತುಗಳನ್ನು ನಮ್ರಾಜ್ ದೋಚಿ ಪರಾರಿಯಾಗಿದ್ದಾನೆ.

ನವೆಂಬರ್ 7ರಂದು ಸುರೇಂದ್ರ ಕುಮಾರ್ ಜೈನ್ ಅವರ ಕುಟುಂಬ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ವಿಜಯನಗರ ಪೊಲೀಸ್‌ ಠಾಣೆಗೆ ಸುರೇಂದ್ರ ಕುಮಾ‌ರ್ ಜೈನ್ ದೂರು ನೀಡಿದ್ದು, ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್, ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

ಕರ್ನಾಟಕ ನಿವೃತ್ತ  ನೌಕರರ ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ

ಸಲು ಹಾಗೂ ಆರ್ಥಿಕ ಸೌಲಭ್ಯವನ್ನು ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಬೇಕೆಂದು ನಡೆಸುತ್ತಿರುವ…

1 of 2