Gl harusha
ರಾಜ್ಯ ವಾರ್ತೆ

ಮಹಿಳೆಯ ಮೃತದೇಹ ನಗ್ನ  ಸ್ಥಿತಿಯಲ್ಲಿ ಪತ್ತೆ!!

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ನಗ್ನ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ನಗ್ನ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ.

srk ladders
Pashupathi
Muliya

ಬೇರೆಲ್ಲೂ ಕೊಲೆ ಮಾಡಿ ಇಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಶ್ವಾನದಳದಿಂದ ಪರಿಶೀಲನೆ ಮಾಡಲಾಗಿದೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಮೂರು ದಿನಗಳಿಂದ ಏರಿಯಾದಲ್ಲಿ ಕೆಟ್ಟ ವಾಸನೆ ಬರುತ್ತಿತ್ತು. ಹೀಗಾಗಿ ಇಲಿ ಸತ್ತಿರಬಹುದೆಂದು ಊಹಿಸಿ ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿಗೆ ದೂರು ನೀಡಿದ್ದಾರೆ. ಪೌರ ಕಾರ್ಮಿಕರಿಂದ ಚರಂಡಿ ಸ್ವಚ್ಚತೆ ಮಾಡುವ ವೇಳೆ ಮೊದಲು ಕಾಲು ಕಾಣಿಸಿದ್ದು, ಪರಿಶೀಲನೆ ನಡೆಸಿದಾಗ ಕೊಳೆತ ಶವ ಪತ್ತೆ ಆಗಿದೆ

ದುಷ್ಕರ್ಮಿಗಳು ವೈರ್‌ನಿಂದ ಕೈಕಾಲು ಕಟ್ಟಿ ಮಹಿಳೆಯನ್ನು ಕೊಲೆಗೈದು ಬಳಿಕ ಶವ ಚರಂಡಿಗೆ ಎಸೆದು ಹೋಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಸರ್ಜಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ರಾಜ್ಯದ ಶಕ್ತಿಕೇಂದ್ರಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ! ಯು.ಟಿ. ಖಾದರ್’ಗೆ ಅಭಿನಂದನೆ‌ ತಿಳಿಸಿದ ಸಿದ್ದರಾಮಯ್ಯ

ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ ದೀಪಾಲಂಕಾರದ…