ದಾವಣಗೆರೆ: ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರ ಕಾಪರ್ ಏಜ್ ಗ್ರೂಪ್ ಇನ್ಸಿಟ್ಯೂಟ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶರತ್ ಜಿ.ಎಸ್. (23) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ ಶರತ್ ಇತ್ತೀಚೆಗೆ ರಾಜಕೀಯದತ್ತ ಆಸಕ್ತರಾಗಿದ್ದರು. ಕಾಂಗ್ರೆಸ್ ಪಕ್ಷದೊಂದಿಗೂ ಗುರುತಿಸಿಕೊಂಡಿದ್ದರು.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.