ರಾಜ್ಯ ವಾರ್ತೆ

ನಂದಿನಿ ಬ್ರಾಂಡಿನಡಿ ಹಿಟ್ಟು ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆ.ಎಂ.ಎಫ್.! ಉತ್ಕೃಷ್ಟ ಗುಣಮಟ್ಟದ ಈ ಹಿಟ್ಟುಗಳು ಇದೀಗ ಮಾರುಕಟ್ಟೆಯಲ್ಲಿ ಲಭ್ಯ!

ಹೊಸ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿರುವ ಕೆಎಂಎಫ್ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಂದಿನಿ ಬ್ರಾಂಡ್‌ನಡಿ (Nandini Brand) ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಆರಂಭಿಸಲು ತೀರ್ಮಾನಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಹೊಸ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿರುವ ಕೆಎಂಎಫ್ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಂದಿನಿ ಬ್ರಾಂಡ್‌ನಡಿ (Nandini Brand) ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಆರಂಭಿಸಲು ತೀರ್ಮಾನಿಸಿದೆ. ಈ ಮೂಲಕ ನಗರದ ಹಿಟ್ಟಿನ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸಿರುವ ಖಾಸಗಿ ಕಂಪನಿಗಳಿಗೆ ಪೈಪೋಟಿ ಒಡ್ಡಲು ತೀರ್ಮಾನಿಸಿದೆ. ಕರ್ನಾಟಕ ಹಾಲು ಒಕ್ಕೂಟ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬಿಟ್ಟಿದೆ.

ಉತ್ಕೃಷ್ಟ ಗುಣಮಟ್ಟಕ್ಕೆ ಹೆಸರಾದ ಕರ್ನಾಟದ ಹೆಮ್ಮೆ ಕೆಎಂಎಫ್ ‘ನಂದಿನಿ’ ಬ್ಯಾಂಡ್‌ನಡಿ 150ಕ್ಕೂ ಹೆಚ್ಚು ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳು ಮಾರುಕಟ್ಟೆಯಲ್ಲಿದ್ದು ಇದೀಗ ನಂದಿನಿ ಬ್ರಾಂಡ್ ಹೆಸರಿನಲ್ಲೇ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಬಿಡುಗಡೆಯಾಗಿದೆ.

SRK Ladders

ಹಾಲಿನ ಉಪ ಉತ್ಪನ್ನ ‘ವೇ ಪೌಡರ್’ ಮತ್ತು ಗೋಧಿ ಬೆರೆಸಿ ತಯಾರಿಸಲಾಗುವ ನಂದಿನಿ ಬ್ರಾಂಡ್‌ನ ದೋಸೆ ಹಿಟ್ಟಿನಲ್ಲಿ ಪ್ರೋಟೀನ್ ಪ್ರಮಾಣ ಹೆಚ್ಚಿರುತ್ತದೆ.

ನಂದಿನಿ ಬ್ರಾಂಡ್‌ನ ದೋಸೆ ಹಿಟ್ಟು ಖಾಸಗಿ ಬ್ರಾಂಡ್‌ಗಳ ದೋಸೆ ಹಿಟ್ಟಿಗಿಂತ ಹೆಚ್ಚು ಗುಣಮಟ್ಟದಿಂದ ಕೂಡಿರಲಿದೆ. ಜೊತೆಗೆ ಬೆಲೆ ಕೂಡ ಕೈಗೆಟುಕುವಂತಿದೆ ಎಂದು ಪ್ರಕಟನೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 2