ಬೆಂಗಳೂರು : ಪ್ರಿಯಕರನೇ ಚಾಕು ಇರಿದು ಯುವತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದಿರಾ ನಗರದ ಅಪಾಟ್‌ರ್ಮೆಂಟ್ ಒಂದರಲ್ಲಿ ನಡೆದಿದೆ.
ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗಾಯ್ ಎಂದು ಗುರುತಿಸಲಾಗಿದೆ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು.
ಇಬ್ಬರ ನಡುವೆ ಸ್ನೇಹ ಕೆಲವೇ ದಿನಗಳಲ್ಲಿ ಪ್ರೀತಿಯಾಗಿ ಅಂಕುರಿಸಿದೆ. ನಂತರ, ಇನ್ನು ಇಬ್ಬರೂ ಮನೆಯನ್ನು ಬಿಟ್ಟು ಒಬ್ಬಂಟಿಯಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರಿಂದ ನಗರದ ವಿವಿಧೆಡೆ ಸುತ್ತಾಡಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಆಗ ಇಬ್ಬರ ನಡುವೆ ಜಗಳದ ವೇಳೆ ಪ್ರೇಮಿ ಆರವ್ ತನ್ನ ಪ್ರೇಯಸಿ ಮಾಯಾಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಅಲ್ಲಿಂದ ಪರಾರಿ ಆಗಿದ್ದಾರೆ. ಈ ಕೊಲೆ ನಡೆದು ಮೂರು ದಿನಗಳ ನಂತರ ಮನೆಯಿಂದ ದುರ್ವಾಸನೆ ಬಂದ ನಂತರ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಇಬ್ಬರೂ ಒಟ್ಟಿಗೆ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಯುವಕನೇ ತನ್ನ ಪ್ರೇಯಸಿಯನ್ನು ಕೊಲೆ ಮಾಡಿ ಪರಾರಿ ಆಗಿರುವ ಘಟನೆ ನಡೆದಿದೆದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಂದಿರಾ ನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.