ರಾಜ್ಯ ವಾರ್ತೆ

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ:ಪ್ರಾಣಾಪಾಯವಿಲ್ಲದೆ ಪ್ರಯಾಣಿಕರ ರಕ್ಷಣೆ!!

GL
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

 

ಮೈಸೂರು: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ನಡಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಚ್ ಡಿ ಕೋಟೆ ಘಟಕಕ್ಕೆ ಸೇರಿದ ಬಸ್‌ ಚಲಿಸುತ್ತಿದ್ದ ವೇಳೆಯೇ ಬೆಂಕಿ ಹತ್ತಿಕೊಂಡು ಉರಿದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಬಸ್‌ ಸಿಬ್ಬಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ತಾಂತ್ರಿಕ ದೋಷಗಳಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣಗಳು ಇನ್ನೂ ತಿಳಿದು ಬಂದಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts