ರಾಜ್ಯ ವಾರ್ತೆ

ವಿಶ್ವಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ ದತ್ತಪೀಠದಲ್ಲಿ ದತ್ತಜಯಂತಿ: ನಾಲ್ಕು ದಿನ ಪ್ರವಾಸಿಗರಿಗೆ ನಿರ್ಬಂಧ..

ಬಾಬಾ ಬುಡಾನ್ ಗಿರಿ ದತ್ತಪೀಠದಲ್ಲಿ ದತ್ತಜಯಂತಿಯು ವಿಶ್ವಹಿಂದೂ ಪರಿಷತ್‌, ಬಜರಂಗದಳದ ನೇತೃತ್ವದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ 4 ದಿನಗಳ ಕಾಲ ಈ ಭಾಗದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು : ಬಾಬಾ ಬುಡಾನ್ ಗಿರಿ ದತ್ತಪೀಠದಲ್ಲಿ ದತ್ತಜಯಂತಿಯು ವಿಶ್ವಹಿಂದೂ ಪರಿಷತ್‌, ಬಜರಂಗದಳದ ನೇತೃತ್ವದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ 4 ದಿನಗಳ ಕಾಲ ಈ ಭಾಗದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಡಿ. 11ರಿಂದ 14 ವರೆಗೆ ಈ ನಾಲ್ಕು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರ ಸೇರಿದಂತೆ ಪಶ್ಚಿಮ ಘಟ್ಟಗಳ ಸಾಲಿನ ಎಲ್ಲಾ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಸಂಪೂರ್ಣ ನಿರ್ಬಂಧ ಹೇರಿದ್ದು, ಡಿ. 15 ರ ಬೆಳಗ್ಗೆ 10 ಗಂಟೆ ನಂತರ ಚಿಕ್ಕಮಗಳೂರು ತಾಲೂಕಿನ ಪಶ್ಚಿಮಘಟ್ಟಗಳ ಸಾಲು ಮುಳ್ಳಯ್ಯನಗಿರಿ, ದತ್ತಪೀಠ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ತಿಳಿಸಲಾಗಿದೆ.

SRK Ladders

ದತ್ತ ಪೀಠದಲ್ಲಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ 9 ದಿನಗಳ ಕಾಲ ದತ್ತ ಜಯಂತಿ ನಡೆಯಲಿದೆ. ಅದರಲ್ಲಿ 12,13,14 ಈ ಮೂರು ದಿನಗಳು ಸೂಕ್ಷ್ಮ ದಿನಗಳು ಎನ್ನಲಾಗಿದ್ದು, ಈ ಮೂರು ದಿನಗಳ ಕಾಲ ದತ್ತಪೀಠದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಹಾಗಾಗಿ

ಮುಂಜಾಗ್ರತಾ ಕ್ರಮವಾಗಿ ಪ್ರವಾಸಿ ವಾಹನಗಳು ಮತ್ತು ದತ್ತ ಮಾಲಾಧಾರಿ ವಾಹನಗಳಿಂದ ಜನದಟ್ಟಣೆ ಆಗಬಾರದು. ಅಲ್ಲದೆ ಭದ್ರತೆ ದೃಷ್ಟಿಯಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ ಎನ್ನಲಾಗಿದ್ದು, 14 ರಂದು ರಾಜ್ಯದ ವಿವಿಧೆಡೆಯಿಂದ 25 ಸಾವಿರಕ್ಕೂ ಹೆಚ್ಚು ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ತೆರಳಿ ದತ್ತಪಾದುಕದ ದರ್ಶನ ಪಡೆಯಲಿದ್ದಾರೆ. ಕಾರ್ಯಕ್ರಮ ಮುಗಿಯುವವರೆಗೂ ಸುಮಾರು 5 ಸಾವಿರಕ್ಕೂ ಹೆಚ್ಚು ಪೊಲೀಸರು ದತ್ತಪೀಠಕ್ಕೆ ಸೇರಿ ಜಿಲ್ಲೆಯಾದ್ಯಂತ ಸರ್ಪಗಾವಲಿನ ಭದ್ರತೆ ಏರ್ಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 2