tamanvi
ರಾಜ್ಯ ವಾರ್ತೆ

ಮುಂಬೈಯಿಂದ ಮಂಗಳೂರಿನ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ: ಉಡುಪಿಯ ಅಖಿಲೇಶ್ ಖಾಕಿ ಬಲೆಗೆ

ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಯಲ್ಲಿ ಡ್ರಗ್ ಪೆಡ್ಲರ್ ಖಾಕಿ ಬಲೆಗೆ ಬಿದ್ದಿದ್ದಾನೆ. ಮುಂಬೈಯಿಂದ ಮಂಗಳೂರು ನಗರಕ್ಕೆ ಗಾಂಜಾವನ್ನು ಸಾಗಾಟ ಮಾತ್ತು ಮಾರಾಟ ಮಾಡುತ್ತಿದ್ದ ಉಡುಪಿಯ ಅಂಬಲಪಾಡಿ ನಿವಾಸಿ ಅಖಿಲೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಈತ ಮೂಲ್ಕಿಯ ಬಪ್ಪನಾಡು ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಸಪ್ರೈ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ ಅಖಿಲೇಶ್ ನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ 1,62,000 ರೂ ಮೌಲ್ಯದ 6.7 ಕೆಜಿ ಗಾಂಜಾ, ಮೊಬೈಲ್ ಫೋನ್ ವಶ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಅಖಿಲೇಶ್‌ ವಿರುದ್ಧ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯಲ್ಲಿ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟದ ಪ್ರಕರಣ, ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ಪ್ರಕರಣ, ಉಡುಪಿ ಸೆನ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಮಾದಕ ವಸ್ತು ಸೇವನೆ ಮಾಡಿದ ಪ್ರಕರಣ ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…