Gl harusha
ರಾಜ್ಯ ವಾರ್ತೆ

ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ

ಬಡ ಮತ್ತು ಆರ್ಥಿಕವಾಗಿ ದುರ್ಬಲವಿರುವ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸ್ವ ಉದ್ಯೋಗದ ಅವಕಾಶವನ್ನು ಕಲ್ಪಿಸಿಕೊಡಲು ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದ ಯೋಜನೆ 

ಈ ಸುದ್ದಿಯನ್ನು ಶೇರ್ ಮಾಡಿ

ಬಡ ಮತ್ತು ಆರ್ಥಿಕವಾಗಿ ದುರ್ಬಲವಿರುವ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸ್ವ ಉದ್ಯೋಗದ ಅವಕಾಶವನ್ನು ಕಲ್ಪಿಸಿಕೊಡಲು ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದ ಯೋಜನೆ ಇದಾಗಿದೆ. ಈ ಯೋಜನೆಯು ಟೈಲರಿಂಗ್ ಕೆಲಸದ ಮೂಲಕ ಮಹಿಳೆಯರು ಮನೆಯಿಂದಲೇ ಹಣವನ್ನು ಗಳಿಸಲು ಅನುವು ಮಾಡಿಕೊಡುತ್ತದೆ.

srk ladders
Pashupathi
Muliya

ಸುಮಾರು 50 ಸಾವಿರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಸಿಗಲಿದ್ದು, ಕರ್ನಾಟಕ ಸೇರಿದಂತೆ ರಾಜಸ್ಥಾನ, ಗುಜರಾತ್‌, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ ಈ ರಾಜ್ಯಗಳ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:

• ವಯೋಮಿತಿ : ಅರ್ಜಿದಾರರು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು.

• ಆದಾಯ ಮಿತಿ : ಕುಟುಂಬದ ವಾರ್ಷಿಕ ಆದಾಯವು ರೂ 2.5 ಲಕ್ಷಕ್ಕಿಂತ ಕಡಿಮೆಯಿರಬೇಕು.

• ಕುಟುಂಬದ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿದ್ದರೆ ಅಂತಹ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಲ್ಲ.

• ಭಾರತೀಯ ಪೌರತ್ವ : ಭಾರತೀಯ ಪೌರತ್ವವನ್ನು

ಹೊಂದಿರುವ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಧಾನ:

ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ:

1. ಮೊದಲಿಗೆ, ಯೋಜನೆಯ ಅಧಿಕೃತ ವೆಬ್‌ಸೈಟ್‌ ನಲ್ಲಿ

ಉಚಿತ ಹೊಲಿಗೆ ಮೆಷಿನ್  ಯೋಜನೆ 2024 (Karnataka free sewing machine scheme application form 2024-25)  ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡತಕ್ಕದ್ದು

3. ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.

ಆಫ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ಮಹಿಳೆಯರು ತಮ್ಮ ಹತ್ತಿರದ ಮಹಿಳಾ ಸಬಲೀಕರಣ ಕೇಂದ್ರ ಅಥವಾ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನೀವು ಅಲ್ಲಿಂದ ಅರ್ಜಿ ನಮೂನೆಯನ್ನು ಪಡೆದು, ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅದನ್ನು ಸಲ್ಲಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:

• ಆಧಾರ್ ಕಾರ್ಡ್

• ಆದಾಯ ಪ್ರಮಾಣಪತ್ರ

• ಜನನ ಪ್ರಮಾಣಪತ್ರ, ಆಧಾರ್ ಕಾರ್ಡ್

• ಪಾಸ್ಪೋರ್ಟ್ ಸೈಜ್ ಫೋಟೋ

• ವಾಸಸ್ಥಳ ದೃಢೀಕರಣ ಪತ್ರ


ಈ ಸುದ್ದಿಯನ್ನು ಶೇರ್ ಮಾಡಿ

Related Posts

ರಾಜ್ಯದ ಶಕ್ತಿಕೇಂದ್ರಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ! ಯು.ಟಿ. ಖಾದರ್’ಗೆ ಅಭಿನಂದನೆ‌ ತಿಳಿಸಿದ ಸಿದ್ದರಾಮಯ್ಯ

ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ ದೀಪಾಲಂಕಾರದ…